ಬೆಳಗಾವಿ: ಜನವಸತಿ ಪ್ರದೇಶದಲ್ಲಿ ಅಕ್ರಮವಾಗಿ ಪಟಾಕಿ ಸಂಗ್ರಹಿಸಿಕೊಂಡಿದ್ದ ಅಂಗಡಿ ಮೇಲೆ ಶುಕ್ರವಾರ ಜಿಲ್ಲಾ ಪೊಲೀಸರು ದಾಳಿ ನಡೆಸಿ 1.60 ಲಕ್ಷ ರೂ. ಮೌಲ್ಯದ ಪಟಾಕಿ ಜಪ್ತಿ ಮಾಡಿಕೊಂಡಿದ್ದಾರೆ.
ಗಣೇಶೋತ್ಸವ ಆಚರಣೆ ಹಿನ್ನೆಲೆ ಮಾರಾಟಕ್ಕಾಗಿ ಮೂಡಲಗಿ ಪಟ್ಟಣದ ಜನವಸತಿ ಪ್ರದೇಶಗಳಲ್ಲಿ ಹೆಚ್ಚಿನ ಮದ್ದು ತುಂಬಿರುವ ಪಟಾಕಿಗಳನ್ನು ಸಂಗ್ರಹಿಸಿಟ್ಟಿದ್ದರು. ಅನುಮತಿ ಇಲ್ಲದೆ ಪಟಾಕಿ ಸಂಗ್ರಹಿಸಿಟ್ಟುಕೊಳ್ಳುವುದು ಕಾನೂನು ಬಾಹಿರವಾಗಿದೆ. ಈ ಹಿನ್ನೆಲೆಯಲ್ಲಿ ಅಂಗಡಿ ಮೇಲೆ ದಾಳಿ ನಡೆಸಿ 1,60,675 ರೂ. ಮೌಲ್ಯದ ಪಟಾಕಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಕುರಿತು ಮೂಡಲಗಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ ಎಂದು ಎಸ್ಪಿ ಡಾ.ಸಂಜೀವ ಪಾಟೀಲ ತಿಳಿಸಿದ್ದಾರೆ.