ಭದ್ರಾವತಿ: ಹಳೇನಗರದ ಬಸವೇಶ್ವರ ವೃತ್ತದಲ್ಲಿ ನಗರಸಭೆ 10 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿದ್ದ ಶುದ್ಧ ಕುಡಿಯುವ ನೀರಿನ ಘಟಕ ನಿರ್ವಹಣೆ ಇಲ್ಲದೆ ನಿರುಪಯುಕ್ತವಾಗಿದೆ. ನಿರ್ಲಕ್ಷೃ ವಹಿಸಿದ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ರಾಷ್ಟ್ರ ಪಕ್ಷದ ಮುಖಂಡರು ನಗರಸಭೆ ಪೌರಾಯುಕ್ತರಿಗೆ ಮನವಿ ಸಲ್ಲಿಸಿದರು.
ಬಸವೇಶ್ವರ ವೃತ್ತದ ಕುಡಿಯುವ ನೀರಿನ ಘಟಕವು ಸೇರಿದಂತೆ ಹಲವೆಡೆ ಲಕ್ಷಾಂತರ ರೂ. ವೆಚ್ಚದಲ್ಲಿ ಕುಡಿಯುವ ನೀರಿನ ಘಟಕಗಳು ನಿರ್ಮಿಸಲಾಗಿದ್ದು, ನಿರ್ವಹಣೆ ಇಲ್ಲದೆ ಪಾಳು ಬಿದ್ದಿವೆ. ನಿರ್ವಹಣೆ ಮಾಡುವವರು ನಿರ್ಲಕ್ಷೃ ತಾಳಿರುವುದರಿಂದ ಸರ್ಕಾರದ ಯೋಜನೆಗಳು ಯಶಸ್ಸು ಕಾಣುತ್ತಿಲ್ಲ. ಈ ಬಗ್ಗೆ ಜನಪ್ರತಿನಿಧಿಗಳು ಮೌನವಹಿಸಿರುವುದು ಖಂಡನೀಯ ಎಂದು ಪಕ್ಷದ ಪ್ರಮುಖರು ಬೇಸರ ವ್ಯಕ್ತಪಡಿಸಿದರು.
ಕೂಡಲೇ ಕುಡಿಯುವ ನೀರಿನ ಘಟಕಗಳ ನಿರ್ವಹಣೆ ಮಾಡಬೇಕು. ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿ ಪಕ್ಷದ ತಾಲೂಕು ಘಟಕದ ಅಧ್ಯಕ್ಷ ನಾಗರಾಜ್ ಸಿಂಧೆ ನೇತೃತ್ವದಲ್ಲಿ ಮುಖಂಡರಾದ ತೀರ್ಥಕುಮಾರ್, ಬಿ.ಎಸ್.ದಯಾನಂದ್ ಇತರರು ಪೌರಾಯುಕ್ತ ಮನುಕುಮಾರ್‌ಗೆ ಮನವಿ ಸಲ್ಲಿಸಿದರು.