ಜಿಲ್ಲೆ

ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೇಳಿಕೆ; 10 ರೂ. ನಾಣ್ಯ ನಿರ್ಬಂಧವಿಲ್ಲ

ಧಾರವಾಡ: ಭಾರತೀಯ ರಿಸರ್ವ್ ಬ್ಯಾಂಕ್ ಅಧಿಕೃತವಾಗಿ ಟಂಕಿಸಿರುವ 10 ರೂ. ನಾಣ್ಯಗಳು ಚಲಾವಣೆಯಲ್ಲಿವೆ. ಸಾರ್ವಜನಿಕರು ತಮ್ಮ ದಿನನಿತ್ಯದ ವಹಿವಾಟುಗಳಲ್ಲಿ ಸಂಶಯವಿಲ್ಲದೆ ಬಳಸಬಹುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೇಳಿದರು.
ತಮ್ಮ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾ ಲೀಡ್ ಬ್ಯಾಂಕ್ ವತಿಯಿಂದ ಶುಕ್ರವಾರ ಆಯೋಜಿಸಿದ್ದ ಸಭೆಯಲ್ಲಿ ಅವರು ಮಾತನಾಡಿದರು.
ಕೆಲವೆಡೆ 10 ರೂ. ನಾಣ್ಯಗಳನ್ನು ಆರ್‌ಬಿಐ ನಿಷೇಽಸಿದೆ ಎಂದು ಸುಳ್ಳು ಸುದ್ದಿ ಹರಡಿರುವ ಪರಿಣಾಮ ಸಾರ್ವಜನಿಕರಲ್ಲಿ ಗೊಂದಲ ಉಂಟಾಗಿದೆ. ಆದರೆ, ಕೇಂದ್ರ ಸರ್ಕಾರವಾಗಲಿ, ಆರ್‌ಬಿಐ ಆಗಲಿ ನಾಣ್ಯ ಚಲಾವಣೆಯನ್ನು ನಿಷೇಽಸಿಲ್ಲ. ಅವುಗಳ ಚಲಾವಣೆಯನ್ನು ಹಿಂಪಡೆದಿಲ್ಲ. ಸಾರ್ವಜನಿಕರು ಸುಳ್ಳು ಸುದ್ದಿಗಳನ್ನು ನಂಬಬಾರದು ಎಂದರು.
ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕ ಪ್ರಭುದೇವ ಎನ್.ಜಿ. ಮಾತನಾಡಿ, ಅಂಗಡಿಕಾರರು ೧೦ ರೂ. ನಾಣ್ಯಗಳನ್ನು ಸ್ವೀಕರಿಸಬೇಕು. ಇದರಿಂದ ಚಿಲ್ಲರೆ ಸಮಸ್ಯೆ ತಲೆದೋರುವುದಿಲ್ಲ. ಸಾರ್ವಜನಿಕರು ಈ ನಾಣ್ಯಗಳನ್ನು ಬ್ಯಾಂಕ್‌ಗಳಲ್ಲಿ ಠೇವಣಿ ಮಾಡಬಹುದು. ನಾಣ್ಯಗಳನ್ನು ಸ್ವೀಕರಿಸದಿದ್ದರೆ ಕಾಯ್ದೆಯ ಉಲ್ಲಂಘನೆಯಾಗುತ್ತದೆ ಎಂದರು.
ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಽಕಾರಿಗಳಿದ್ದರು.