ಜಿಲ್ಲೆ

10 ರಂದು ಕೋರಿಕೆ ವರ್ಗಾವಣೆ ಕೌನ್ಸಿಲಿಂಗ್

ಚಿತ್ರದುರ್ಗ: ಜಿಲ್ಲೆಯಲ್ಲಿ ಕರ್ನಾಟಕ ವಸತಿ ಶಿಕ್ಷಣಗಳ ಸಂಘದಡಿ ಕಾರ‌್ಯನಿರ್ವಹಿಸುತ್ತಿರುವ ಮುರಾರ್ಜಿದೇಸಾಯಿ, ಕಿತ್ತೂರು ರಾಣಿ ಚನ್ನಮ್ಮ,ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆಗಳ 2024-25ನೇ ಸಾಲಿನ 6ನೇ ತರಗತಿ ವಿದ್ಯಾ ರ್ಥಿಗಳ ಕೋರಿಕೆ ವರ್ಗಾವಣೆ ಹಾಗೂ 6ನೇ ಸುತ್ತಿನ ಸೀಟು ಹಂಚಿಕೆ ಕೌನ್ಸೆಲಿಂಗ್ ಸೆ.10ರಂದು ಹೊಳಲ್ಕೆರೆ ತಾಲೂಕು ಚಿತ್ರಹಳ್ಳಿ ವಸತಿ ಶಾಲೆಯಲ್ಲಿ ನಡೆಯಲಿದೆ. ಅಂದು ಬೆಳಗ್ಗೆ 10.30ರಿಂದ ಕೋರಿಕೆ ವರ್ಗಾವಣೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಕೌನ್ಸೆಲಿಂಗ್ ಹಾಗೂ ಮಧ್ಯಾಹ್ನ 2ರಿಂದ 6ನೇ ಸುತ್ತಿನ ಆಯ್ಕೆ ಪಟ್ಟಿಯಲ್ಲಿರುವ ವಿದ್ಯಾರ್ಥಿಗಳಿಗೆ ಸೀಟು ಹಂಚಿಕೆ ಕೌನ್ಸೆಲಿಂಗ್ ನಡೆಸಲಾಗುವುದು. 6ನೇ ಸುತ್ತಿನ ಆಯ್ಕೆ ಪಟ್ಟಿ ಹಾಗೂ ಕಟ್‌ಆಫ್ ಅಂಕಗಳ ವಿವರವನ್ನು ಶಾಲೆಗಳಲ್ಲಿ ಪ್ರಕಟಿಸಲಾಗಿದ್ದು, ಕಟ್‌ಆಫ್ ಅಂಕಗಳ ಮೇಲಿರುವ ವಿದ್ಯಾರ್ಥಿಗಳು ಹಾಗೂ ಪಾಲಕರು ಆಧಾರ್‌ಕಾರ್ಡ್ ಮತ್ತಿತರ ಅಗತ್ಯ ಮೂಲ ದಾಖಲೆಗಳೊಂದಿಗೆ ಹಾಜರಾಗಬೇಕು. ಅಭ್ಯರ್ಥಿಗಳಿಗೆ ಮೀಸಲಾತಿ ಹಾಗೂ ಮೆರಿಟ್ ಅನುಸಾರ ಖಾಲಿ ಇರುವ ಸ್ಥಾನಗಳಿಗೆ ಕೌನ್ಸೆಲಿಂಗ್ ಮೂಲಕ ಪ್ರವೇಶ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ವಸತಿ ಶಾಲೆ ಪ್ರಾಂಶುಪಾಲರನ್ನು ಸಂಪರ್ಕಿಸಬಹುದೆಂದು ಸಮಾಜ ಕಲ್ಯಾಣಇಲಾಖೆ ಜಂಟಿ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ ತಿಳಿಸಿದ್ದಾರೆ.
(ಸಿಟಿಡಿ 3 ಜಗದೀಶ್ ಹೆಬ್ಬಳ್ಳಿ)