ಜಿಲ್ಲೆ

10 ಲಕ್ಷ ರೂ. ಮೌಲ್ಯದ ಮಾದಕವಸ್ತು ಎಂ.ಡಿ.ಎಂ.ಎ. ಪತ್ತೆ ಮಂಗಳೂರಿನಲ್ಲಿ ಮೊದಲ ಬಾರಿಗೆ ದೊಡ್ಡ ಮೊತ್ತದಲ್ಲಿ ಪತ್ತೆ

ಮಂಗಳೂರು: ಕೇರಳದ ಕಡೆಗೆ ಕಾರಿನಲ್ಲಿ ಅಕ್ರಮವಾಗಿ 10.20 ಲಕ್ಷ ರೂ. ಮೌಲ್ಯದ 170 ಗ್ರಾಂ ಎಂಡಿಎಂಎ ಸಾಗಾಟ ಮಾಡುತ್ತಿದ್ದಾಗ ಕೊಣಾಜೆ ಪೊಲೀಸರು ಪತ್ತೆ ಮಾಡಿದ್ದಾರೆ. ಇದು ಮಂಗಳೂರು ನಗರದಲ್ಲಿ ಪ್ರಥಮ ಬಾರಿಗೆ ವಾಣಿಜ್ಯ ಪ್ರಮಾಣದ ದೊಡ್ಡ ಮೊತ್ತದ ಎಂಡಿಎಂಎ ಆಗಿದೆ.

ಮಂಜೇಶ್ವರದ ಮಹಮ್ಮದ್ ಮುನಾಫ್, ಮಹಮ್ಮದ್ ಮುಝಾಂಬಿಲ್, ಅಹಮದ್ ಮಸೂಕ್ ಎಂಬವರನ್ನು ಬಂಧಿಸಿದ್ದಾರೆ. ಕೃತ್ಯಕ್ಕೆ ಉಪಯೋಗಿಸಿದ ಕಾರು, ನಾಲ್ಕು ಮೊಬೈಲ್ ಫೋನ್‌ ಗಳನ್ನು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದ ಸೊತ್ತುಗಳ ಒಟ್ಟು ಮೌಲ್ಯ 17.37 ಲಕ್ಷ ರೂ. ಆಗಿದೆ ಎಂದು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಬಂಧಿತರ ಪೈಕಿ ಓರ್ವ ವಿದ್ಯಾರ್ಥಿ, ಇಬ್ಬರು ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಇವರಿಗೆ ಯಾರು ಕೊಟ್ಟಿದ್ದಾರೆ ಎನ್ನುವ ಬಗ್ಗೆ ತನಿಖೆ ನಡೆಯುತ್ತಿದೆ. ಮಂಗಳೂರು ಹಾಗೂ ಕಾಸರಗೋಡಿನಲ್ಲಿ ಇವರಿಗೆ ಗ್ರಾಹಕರಿದ್ದಾರೆ.