ಜಿಲ್ಲೆ

ಮಾದಕ ದ್ರವ್ಯ ಮಿಶ್ರಿತ 100 ಕೆ.ಜಿ ಚಾಕಲೆಟ್ ವಶ

ಮಂಗಳೂರು: ನಗರದ ಎರಡು ಕಡೆ ಮಾರಾಟ ಮಾಡಲಾಗುತ್ತಿದ್ದ ಮಾದಕ ವಸ್ತು ಮಿಶ್ರಿತ 100 ಕೆ.ಜಿ. ಚಾಕಲೆಟ್‌ಗಳನ್ನು ಪಾಂಡೇಶ್ವರ ಪೊಲೀಸರು ಬುಧವಾರ ವಶಪಡಿಸಿಕೊಂಡಿದ್ದಾರೆ.

ನಗರದ ರಥಬೀದಿಯಲ್ಲಿ ಮನೋಹರ್ ಶೇಟ್ ಮತ್ತು ಫಳ್ನೀರ್‌ನ ಗೂಡಂಗಡಿಯಲ್ಲಿ ಉತ್ತರ ಪ್ರದೇಶ ಮೂಲದ ಬೆಚನ್ ಸೋನ್ಕರ್ ಎಂಬಾತ ಮಾದಕ ವಸ್ತು ಮಿಶ್ರಿತ ‘ಬಾಂಗ್’ ಎಂಬ ಚಾಕಲೆಟ್‌ಗಳನ್ನು ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದಾರೆ.

ಈ ಚಾಕಲೆಟ್‌ನ ಮಾದರಿಗಳನ್ನು ಹೆಚ್ಚಿನ ಪರೀಕ್ಷೆಗಾಗಿ ವಿಧಿವಿಜ್ಞಾನ ಪ್ರಯೋಗಲಯಕ್ಕೆ ಕಳುಹಿಸಿದ್ದು, ಅದರ ವರದಿ ಆಧಾರದಲ್ಲಿ ಪೊಲೀಸರು ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ.