ಗಂಗಾವತಿ ತಾಲೂಕಿನ ವಡ್ಡರಹಟ್ಟಿ ಶ್ರೀ ವಿದ್ಯಾನಿಕೇತನ ಪದವಿ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಶೈಕ್ಷಣಿಕ ಸಭೆಯಲ್ಲಿ ಸಮೂಹ ಶಿಕ್ಷಣ ಸಂಸ್ಥೆ ಅಧ್ಯಕ್ಷ ನೆಕ್ಕಂಟಿ ಸೂರಿಬಾಬು ಬುಧವಾರ ಮಾತನಾಡಿದರು. ಸಂಸ್ಥೆ ಉಪಾಧ್ಯಕ್ಷ ನೆಕ್ಕಂಟಿ ಆದರ್ಶ, ಪಿಯು ಕಾಲೇಜುಗಳ ಪ್ರಾಂಶುಪಾಲರಾದ ಜಗನ್ನಾಥರಾವ್, ಚಂದ್ರಶೇಖರ್, ಮಲ್ಲಿಕಾರ್ಜುನ, ಉಮಾಶಂಕರ ಇತರರಿದ್ದರು.  
ಜಿಲ್ಲೆ

100 ಎಸ್ಸೆಸ್ಸೆಲ್ಸಿ ಟಾಪರ್‌ಗಳಿಗೆ ಉಚಿತ ಶಿಕ್ಷಣ

ರುದ್ರಪ್ಪ ವಾಲಿ

ಗಂಗಾವತಿ: ಶಿಕ್ಷಣದ ಮೂಲಕ ಭವಿಷ್ಯತ್ವದ ನಾಯಕರನ್ನು ರೂಪಿಸುವುದು ಸಂಸ್ಥೆಯ ಉದ್ದೇಶವಾಗಿದ್ದು, ಕಲ್ಯಾಣ ಕರ್ನಾಟಕ ಭಾಗದ ಎಸ್ಸೆಸ್ಸೆಲ್ಸಿಯ 100 ಟಾಪರ್‌ಗಳಿಗೆ ಪ್ರಸಕ್ತ ಸಾಲಿನಲ್ಲಿ ವಸತಿಯುತ ಪಿಯು ಶಿಕ್ಷಣ ಉಚಿತ ನೀಡಲಾಗುವುದು ಎಂದು ಶ್ರೀ ವಿದ್ಯಾನಿಕೇತನ ಸಮೂಹ ಶಿಕ್ಷಣ ಸಂಸ್ಥೆ ಅಧ್ಯಕ್ಷ ನೆಕ್ಕಂಟಿ ಸೂರಿಬಾಬು ಹೇಳಿದರು.

ತಾಲೂಕಿನ ವಡ್ಡರಹಟ್ಟಿ ಶ್ರೀ ವಿದ್ಯಾನಿಕೇತನ ಪದವಿ ಕಾಲೇಜಿನಲ್ಲಿ ಬುಧವಾರ ಹಮ್ಮಿಕೊಂಡಿದ್ದ ಶೈಕ್ಷಣಿಕ ಸಭೆಯಲ್ಲಿ ಮಾತನಾಡಿದರು. ಪಾಲಕರ ಸಹಕಾರ ಮತ್ತು ಉಪನ್ಯಾಸಕರ ಶ್ರಮದಿಂದ ಸಮೂಹ ಶಿಕ್ಷಣ ಸಂಸ್ಥೆಯ ಪಿಯು ಕಾಲೇಜುಗಳು ಶೇ.98.80ರಷ್ಟು ಲಿತಾಂಶ ಪಡೆದುಕೊಂಡಿದೆ. 2025-26ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಕಲ್ಯಾಣ ಕರ್ನಾಟಕ ಭಾಗದ 32 ತಾಲೂಕುಗಳಲ್ಲಿ ಎಸ್ಸೆಸ್ಸೆಲ್ಸಿಯಲ್ಲಿ ಮೊದಲ ಟಾಪರ್ ಆಗಿರುವ ಸ್ಟೇಟ್, ಸಿಬಿಎಸ್‌ಇ ಮತ್ತು ಐಸಿಎಸ್‌ಇ ಪಠ್ಯಕ್ರಮದ ವಿದ್ಯಾರ್ಥಿಗಳಿಗೆ 2 ವರ್ಷದ ಪಿಯು ಶಿಕ್ಷಣವನ್ನು ಉಚಿತವಾಗಿ ನೀಡಲಾಗುವುದು.

ವಸತಿ, ಶುಲ್ಕ,ಕಲಿಕಾಸಾಮಾಗ್ರಿ ಸೇರಿದಂತೆ ಎಲ್ಲ ವೆಚ್ಚವನ್ನು ಸಂಸ್ಥೆಯೇ ಭರಿಸಲಿದೆ. ಅಯಾ ತಾಲೂಕಿನ ಶಿಕ್ಷಣ ಇಲಾಖೆಯಿಂದ ಟಾಪರ್ ದೃಢೀಕರಣ ಪತ್ರ ಕಡ್ಡಾಯ ತರಬೇಕಿದೆ. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಉಚಿತ ಯೋಜನೆ ಜಾರಿಗೆ ತಂದಿದ್ದು, ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗೆ ಸಂಸ್ಥೆಯ ವಿಶೇಷ ಕೊಡುಗೆಯಾಗಿದೆ. ಪ್ರಸಕ್ತ ಸಾಲಿನ ಪಿಯು ಪರೀಕ್ಷೆಯಲ್ಲಿ ವಿಶೇಷ ಸಾಧನೆ ಮಾಡಿದ 8 ವಿದ್ಯಾರ್ಥಿಗಳಿಗೆ ತಲಾ ಒಂದು ಲಕ್ಷ ರೂ.ಗಳ ಪ್ರೋತ್ಸಾಹ ಧನ ವಿತರಿಸಲಾಗುವುದು ಎಂದರು.

ಇಂಟರ್ ನ್ಯಾಷನಲ್ ಸ್ಕೂಲ್: ತಾಲೂಕಿನ ವಡ್ಡರಹಟ್ಟಿಯಲ್ಲಿ ಐಸಿಎಸ್‌ಇ ಪಠ್ಯಕ್ರಮದ ಇಂಟರ್‌ನ್ಯಾಷನಲ್ ಸ್ಕೂಲ್ ಪ್ರಸಕ್ತ ಸಾಲಿನಿಂದಲೇ ಆರಂಭವಾಗಲಿದ್ದು, ಈಗಾಗಲೇ ಶಾಲಾ ಶಿಕ್ಷಣ ಇಲಾಖೆಯಿಂದ ಪರವಾನಗಿ ಪಡೆಯಲಾಗಿದೆ. ಆರಂಭಿಕ ನರ್ಸರಿಯಿಂದ 8ನೇ ತರಗತಿವರೆಗೂ ಪ್ರವೇಶವಿದ್ದು, ಸ್ಮಾರ್ಟ್ ಬೋರ್ಡ್‌ಗಳನ್ನೊಳಗೊಂಡ ಅಧುನಿಕ ತರಗತಿ ಕೊಠಡಿ ನಿರ್ಮಾಣವಾಗಿವೆ. ಅತ್ಯಾಧುನಿಕ ಲ್ಯಾಬ್, ಲೈಬ್ರರಿ, ಸುಸಜ್ಜಿತ ಒಳಾಂಗಣ, ಹೊರಾಂಗಣ ಕ್ರೀಡಾಂಗಣದ ವ್ಯವಸ್ಥೆ ಮಾಡಲಾಗಿದೆ. ಮಕ್ಕಳಲ್ಲಿನ ಬೌದ್ಧಿಕ, ಭಾವನಾತ್ಮಕ ಮತ್ತು ನೈತಿಕ ಬೆಳವಣಿಗೆಯನ್ನು ಉತ್ತೇಜಿಸುವ ಶಿಕ್ಷಣಕ್ಕೆ ಆದ್ಯತೆ ನೀಡಲಾಗುತ್ತಿದ್ದು, ಅನುಭಾವತ್ಮಕ ಕಲಿಕೆಗೆ ಆದ್ಯತೆ ನೀಡಲಾಗುವುದು ಎಂದರು.

ಸಂಸ್ಥೆ ಉಪಾಧ್ಯಕ್ಷ ನೆಕ್ಕಂಟಿ ಆದರ್ಶ, ಪಿಯು ಕಾಲೇಜು ಪ್ರಾಂಶುಪಾಲರಾದ ಜಗನ್ನಾಥರಾವ್, ಚಂದ್ರಶೇಖರ್, ಮಲ್ಲಿಕಾರ್ಜುನ, ಉಮಾಶಂಕರ, ಪದವಿ ಕಾಲೇಜು ಪ್ರಾಂಶುಪಾಲ ಡಿ.ಎಂ.ಅಭಿಷೇಕ, ಶೈಕ್ಷಣಿಕ ನಿರ್ದೇಶಕರಾದ ನಳಿನಿ, ಕೃಷ್ಣಪ್ರಸಾದ ಇತರರಿದ್ದರು.

ವೈಶಿಷ್ಟ್ಯ ಪೂರ್ಣ ತಾಂತ್ರಿಕ ಕೌಶಲಗಳೊಂದಿಗೆ ವಿದ್ಯಾರ್ಥಿಗಳನ್ನು ಸಶಕ್ತಗೊಳಿಸಲಾಗುತ್ತಿದ್ದು, ವಿಮರ್ಶಾತ್ಮಕ ಚಿಂತನೆ, ಸೃಜನ ಶೀಲತೆ ಮತ್ತು ನಿರಂತರ ಕಲಿಕೆಯನ್ನು ಉತ್ತೇಜಿಸಲಾಗುವುದು. ನೆಕ್ಕಂಟಿ ಸೂರಿಬಾಬು ಅಧ್ಯಕ್ಷ, ಶ್ರೀ ವಿದ್ಯಾನಿಕೇತನ ಸಮೂಹ ಶಿಕ್ಷಣ ಸಂಸ್ಥೆ, ಶ್ರೀರಾಮನಗರ ಮತ್ತು ವಡ್ಡರಹಟ್ಟಿ.