ಬಾಗಲಕೋಟೆ ಜಿಲ್ಲಾಡಳಿತ ಭವನ ಆವರಣದಲ್ಲಿ 100 ಮೀಟರ ಉದ್ದದ ರಾಷ್ಟ್ರ ಧ್ವಜ ಪ್ರದರ್ಶನ 
ಜಿಲ್ಲೆ

100 ಮೀಟರ ಉದ್ದದ ತ್ರಿವರ್ಣ ಧ್ವಜ ಪ್ರದರ್ಶನ

ಸಂತೋಷ ದೇಶಪಾಂಡೆ

ಬಾಗಲಕೋಟೆ: ಜಿಲ್ಲಾಡಳಿತ ಭವನ ಆವರಣದಲ್ಲಿ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಅಂಗವಾಗಿ ಸೂಳಿಕೇರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ನಿರ್ಮಿಸಿದ
100 ಮೀಟರ ಉದ್ದದ ರಾಷ್ಟ್ರ ಧ್ವಜ ಪ್ರದರ್ಶನಕ್ಕೆ ಶಾಸಕ ವೀರಣ್ಣ ಚರಂತಿಮಠ ಶುಕ್ರವಾರ ಚಾಲನೆ ನೀಡಿದರು.ಶಿಕ್ಷಕಿ ಸುಜಾತಾ ಮೇಲಿನಮನಿ ನೂರಾರು ವಿದ್ಯಾರ್ಥಿಗಳು ಜೊತೆ ಸೇರಿ ಸಿದ್ದಪಡಿಸಿರುವ 100 ಮೀಟರ ಉದ್ದದ ತ್ರಿವರ್ಣ ಧ್ವಜವನ್ನು ಕಂಡು ಚರಂತಿಮಠ ಸಂತೋಷ ವ್ಯಕ್ತ ಪಡಿಸಿದರು. ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ಜ್ಯೋತಿ ಭಜಂತ್ರಿ, ಅಪರ ಜಿಲ್ಲಾಕಾರಿ ಮಹಾದೇವ ಮುರಗಿ, ಎಸಿ ಶ್ವೇತಾ ಬಿರಡಿಕರ್, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಎನ್.ವೈ.ಬಸರಿಗಿಡದ, ಡಿಡಿಪಿಐ ಶ್ರೀಶೈಲ ಬಿರಾದಾರ ಇತರರು ಇದ್ದರು.