ಜಿಲ್ಲೆ

101 ತೆಂಗಿನಕಾಯಿ ಒಡೆದ ಎಸ್ಪಿ

ಹನೂರು : ತಾಲೂಕಿನ ಸುಪ್ರಸಿದ್ಧ ಯಾತ್ರಾಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಶನಿವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಟಿ.ಬಿ ಕವಿತಾ 101 ತೆಂಗಿನಕಾಯಿ ಒಡೆದು ಹರಕೆ ತೀರಿಸಿದರು.

ದೀಪಾವಳಿ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಬೆಟ್ಟಕ್ಕೆ ಆಗಮಿಸಿದ್ದ ಅವರು ದೇಗುಲಕ್ಕೆ ತೆರಳಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಬಳಿಕ ಹರಕೆಯ ಕಾರಣ ದೇಗುಲದ ಮುಂಭಾಗ 101 ತೆಂಗಿನಕಾಯಿ ಡೆದರು. ಬಳಿಕ ದೀಪಾವಳಿ ಜಾತ್ರೆ ಶಾಂತಿ ಮತ್ತು ಸುವ್ಯವಸ್ಥೆಯಿಂದ ಜರುಗುವಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ವಹಿಸಲು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು. ಡಿವೈಎಸ್ಪಿ ಧರ್ಮೇಂದ್ರ, ಇನ್ಸ್‌ಪೆಕ್ಟರ್ ಜಗದೀಶ ಹಾಗೂ ಸಿಬ್ಬಂದಿ ಇದ್ದರು.