ನಾಪೋಕ್ಲು: ಇಲ್ಲಿನ ಬಿಲ್ಲವ ಸಮಾಜದಿಂದ ಆ.10ರಂದು ಸ್ಥಳೀಯ ಕೊಡವ ಸಮಾಜದಲ್ಲಿ ಆಟಿಡೊಂಜಿ ದಿನ-2025 ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಅಂದು ಬೃಹತ್ ರಕ್ತದಾನ ಶಿಬಿರ, ಬಿಲ್ಲವ ಸಮಾಜದ ಮಹಾಸಭೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವಿಜೃಂಭಣೆಯಿಂದ ಆಯೋಜಿಸಲು ತೀರ್ಮಾನಿಸಲಾಗಿದೆ ಎಂದು ಪಟ್ಟಣದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ನಾಪೋಕ್ಲು ಬಿಲ್ಲವ ಸಮಾಜದ ಅಧ್ಯಕ್ಷ ಬಿ.ಎಂ.ಪ್ರತೀಪ ಹೇಳಿದರು.
ಆಟಿಡೊಂಜಿ ದಿನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ಶಾಸಕ ಡಾ.ಮಂತರ್ ಗೌಡ, ರಾಮನಗರ ಸೋಲೂರು ಆರ್ಯ ಈಡಿಗ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ವಿಖ್ಯಾತಾನಂದ ಸ್ವಾಮೀಜಿ, ನಾರಾಯಣ ಗುರು ವಿಚಾರ ವೇದಿಕೆ ರಾಜ್ಯಾಧ್ಯಕ್ಷ ಸತ್ಯಜಿತ್ ಸೂರತ್ಕಲ್ ಪಾಲ್ಗೊಳ್ಳಲಿರುವರು ಎಂದು ತಿಳಿಸಿದರು.
ಅಂದು ಬೆಳಗ್ಗೆ 10 ಗಂಟೆಗೆ ಬೃಹತ್ ರಕ್ತದಾನ ಶಿಬಿರವನ್ನು ಉದ್ಘಾಟಿಸಲಾಗುವುದು. ಬಳಿಕ ಆಟಿಡೊಂಜಿ ದಿನ -2025 ಸಭಾ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಬಿಲ್ಲವ ಸಮಾಜದ ಸಾಧಕರನ್ನು ಸನ್ಮಾನಿಸಲಾಗುವುದು. ಬಳಿಕ ಆಟಿ ಮಾಸದ ಸಾಂಪ್ರದಾಯಿಕ ತಿನಿಸುಗಳ ಪ್ರದರ್ಶನ ಏರ್ಪಡಿಸಲಾಗಿದೆ. ಮಧ್ಯಾಹ್ನ 3 ಗಂಟೆಗೆ ಬಿಲ್ಲವ ಸಮಾಜದ ಮಹಾಸಭೆ ಬಳಿಕ ವೈವಿಧ್ಯ ಸಾಂಸ್ಕೃತಿಕ ಕಾರ್ಯಕ್ರಮಗಳು ಆಯೋಜಿಸಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಬೋಧಕ ಆಸ್ಪತ್ರೆ ರಕ್ತನಿಧಿ ಅಧಿಕಾರಿ ಡಾ.ಕರುಂಬಯ್ಯ, ಬಿಜೆಪಿ ಹಿಂದುಳಿದ ವರ್ಗಗಳ ಜಿಲ್ಲಾಧ್ಯಕ್ಷ ಅಪ್ರು ರವೀಂದ್ರ, ಕೊಡಗು ಜಿಲ್ಲಾ ಬಿಲ್ಲವ ಸಮಾಜದ ಅಧ್ಯಕ್ಷ ಲಿಂಗಪ್ಪ, ಮಕ್ಕಂದೂರು ಗ್ರಾಪಂ ಅಧ್ಯಕ್ಷ ಉದ್ಯಮಿ ರಮೇಶ್, ಮಡಿಕೇರಿ ತಾಲೂಕು ಬಿಲ್ಲವ ಸಮಾಜದ ಅಧ್ಯಕ್ಷೆ ಲೀಲಾವತಿ, ಸೋಮವಾರಪೇಟೆ ಬಿಲ್ಲವ ಸಮಾಜದ ಅಧ್ಯಕ್ಷ ಚಂದ್ರಹಾಸ, ವಿರಾಜಪೇಟೆ ಬಿಲ್ಲವ ಸಮಾಜದ ಅಧ್ಯಕ್ಷ ಬಿ.ಎಂ.ಗಣೇಶ್, ಕುಶಾಲನಗರ ಬಿಲ್ಲವ ಸಮಾಜದ ಅಧ್ಯಕ್ಷ ಸುಧೀರ್, ಸುಂಟಿಕೊಪ್ಪ ಬಿಲ್ಲವ ಸಮಾಜದ ಅಧ್ಯಕ್ಷ ಮಣಿ ಮುಖೇಶ್, ಸಿದ್ದಾಪುರ ಬಿಲ್ಲವ ಸಮಾಜದ ಅಧ್ಯಕ್ಷ ಬಿ.ವಿ.ರಂಜನ್ ಹಾಗೂ ಬಂಟ್ವಾಳದ ವಾಗ್ಮಿ ಕುಮಾರಿ ಶ್ರೀನಿಧಿ ಪಾಲ್ಗೊಳ್ಳುವರು ಎಂದು ತಿಳಿಸಿದರು.
ನಾಪೋಕ್ಲು ಬಿಲ್ಲವ ಸಮಾಜದ ಉಪಾಧ್ಯಕ್ಷ ಬಿ.ಆರ್.ವಸಂತ, ಕಾರ್ಯದರ್ಶಿ ಕೆ.ಎಸ್.ರೋಹಿತ್, ಸಮಿತಿ ಸದಸ್ಯರಾದ ಧನಂಜಯ, ಸುನೀಲ್ ಇದ್ದರು.