ಜಿಲ್ಲೆ

ಹುಂಡಿಯಲ್ಲಿ 11.08 ಲಕ್ಷ ರೂ. ಸಂಗ್ರಹ

ಮಾದೇಶ್ ತಿ.ನರಸೀಪುರ

ಗುಂಡ್ಲುಪೇಟೆ: ತಾಲೂಕಿನ ಪ್ರಸಿದ್ಧ ಹಿಮವದ್ ಗೋಪಾಲಸ್ವಾಮಿ ದೇವಾಲಯದ ಹುಂಡಿಯಲ್ಲಿ 11.08 ಲಕ್ಷ ರೂ. ಸಂಗ್ರಹವಾಗಿದೆ.

ಮಾರ್ಚ್ ತಿಂಗಳಲ್ಲಿ ದೇವಾಲಯದಲ್ಲಿ ಶ್ರೀ ಹಿಮವದ್ ಗೋಪಾಲಸ್ವಾಮಿ ರಥೋತ್ಸವ ಜರುಗುವ ಹಿನ್ನೆಲೆಯಲ್ಲಿ ಮುಜರಾಯಿ ಇಲಾಖೆ ಅಧಿಕಾರಿಗಳು ಬುಧವಾರ ಗೋಲಕ ತೆರೆದು ಎಣಿಕೆ ಮಾಡಿದರು ಎಂದು ತಹಸೀಲ್ದಾರ್ ಟಿ.ರಮೇಶ್ ಬಾಬು ತಿಳಿಸಿದರು.

ಗುಂಡ್ಲುಪೇಟೆ ತಾಲೂಕಿನ ಹಿಮವದ್ ಗೋಪಾಲಸ್ವಾಮಿ ಬೆಟ್ಟದ ದೇವಾಲಯದ ಹುಂಡಿ ತೆರೆದ ಮುಜರಾಯಿ ಅಧಿಕಾರಿಗಳು ಹಣ ಎಣಿಕೆ ಮಾಡಿದರು.