ಜಿಲ್ಲೆ

ಆತ್ಮಹತ್ಯೆ ಮಾಡಿಕೊಂಡ ಸಂತೋಷ್ ಕುಟುಂಬಕ್ಕೆ 16 ಲಕ್ಷ ರೂ. ಪರಿಹಾರ: ಯಾರು, ಎಷ್ಟು ಕೊಟ್ಟರು?

ಬೆಳಗಾವಿ: ಸಚಿವರಾಗಿದ್ದ ಕೆ.ಎಸ್. ಈಶ್ವರಪ್ಪ ವಿರುದ್ಧ ಆರೋಪ ಹೊರಿಸಿ ಡೆತ್​ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಗುತ್ತಿಗೆದಾರ ಸಂತೋಷ್ ಪಾಟೀಲ್ ಕುಟುಂಬಕ್ಕೆ 16 ಲಕ್ಷ ರೂ. ಪರಿಹಾರ ಇಂದು ಹಸ್ತಾಂತರಿಸಲಾಗಿದೆ.

ಬೆಳಗಾವಿ ತಾಲೂಕಿನ ಬಡಸ ಗ್ರಾಮದಲ್ಲಿರುವ ಸಂತೋಷ ನಿವಾಸಕ್ಕೆ ಇಂದು ಭೇಟಿ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸಂಸದ ಪ್ರಕಾಶ್ ಹುಕ್ಕೇರಿ ಅವರು ಕುಟುಂಬಸ್ಥರನ್ನು ಮಾತನಾಡಿಸಿ, ಸಾಂತ್ವನ ಹೇಳಿ, ನ್ಯಾಯ ಕೊಡಿಸುವುದಾಗಿ ಭರವಸೆ ನೀಡಿದರು.

ಬಳಿಕ ಕೆಪಿಸಿಸಿ ವತಿಯಿಂದ 11 ಲಕ್ಷ ರೂ., ಮಾಜಿ ಸಂಸದ ಪ್ರಕಾಶ್ ಹುಕ್ಕೇರಿ ಅವರಿಂದ 5 ಲಕ್ಷ ರೂ. ಪರಿಹಾರದ ಚೆಕ್ ನೀಡಲಾಯಿತು. ಈ ಸಂದರ್ಭದಲ್ಲಿ ಶಾಸಕರಾದ ಲಕ್ಷ್ಮೀ ಹೆಬ್ಬಾಳ್ಕರ್, ಅಂಜಲಿ ನಿಂಬಾಳ್ಕರ್, ಮಹಾಂತೇಶ್ ಕೌಜಲಗಿ, ಮಾಜಿ ಶಾಸಕ ಫಿರೋಜ್ ಸೇಠ್​ ಸೇರಿದಂತೆ ಕಾಂಗ್ರೆಸ್​ನ ಹಲವು ನಾಯಕರು ಜತೆಗಿದ್ದರು.