ಹುಬ್ಬಳ್ಳಿ: ಮೇಲ್ಸೇತುವೆ (ಫ್ಲೈಓವರ್) ಕಾಮಗಾರಿ ನಿರ್ಲಕ್ಷೃದಿಂದ ಉಪನಗರ ಠಾಣೆ ಎಎಸ್‌ಐ ನಾಭಿರಾಜ ಮೃತಪಟ್ಟ ಹಿನ್ನೆಲೆಯಲ್ಲಿ ಝಂಡು ಕನ್ಸಟ್ರಕ್ಷನ್ ಕಂಪನಿಯ 11 ಜನರನ್ನು ಪೊಲೀಸರು ಬಂಧಿಸಿದ್ದಾರೆ.
ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣೆ ಎಎಸ್‌ಐ ನಾಭಿರಾಜ ದಯಣ್ಣವರ ಕರ್ತವ್ಯದ ನಿಮಿತ್ತ ತಮ್ಮ ಬೈಕ್‌ನಲ್ಲಿ ಹುಬ್ಬಳ್ಳಿ ಹಳೇ ಕೋರ್ಟ್ ಸರ್ಕಲ್‌ನಲ್ಲಿ ಹೋಗುತ್ತಿದ್ದರು. ಈ ವೇಳೆ ಪ್ರೈಓವರ್ ಕಾಮಗಾರಿ ಮಾಡುತ್ತಿರುವ ಝಂಡು ಕನ್ಸಟ್ರಕ್ಷನ್ ಕಂಪನಿಯ ನೌಕರರು ಯಾವುದೇ ಸುರಕ್ಷತಾ ಕ್ರಮ ಪಾಲಿಸಿರಲಿಲ್ಲ. ಹಾಗಾಗಿ ಮೇಲ್ಸೇತುವೆ ಮೇಲಿಂದ ಕಬ್ಬಿಣದ ರಾಡ್ ಬಿದ್ದು ಎಎಸ್‌ಐ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದರು.
ಈ ಹಿನ್ನೆಲೆಯಲ್ಲಿ ಗುತ್ತಿಗೆ ಕಂಪನಿಯ ನೌಕರರಾದ ಹರ್ಷಾ ಹೊಸಗಾಣಿಗೇರ, ಜಿತೇಂದ್ರಪಾಲ ಶರ್ಮಾ, ಭೂಪೇಂದರ ಪಾಲ್, ಮೊಹಮ್ಮದ ಇಮಾದರೂ ಮಿಯಾ, ಅಸ್ಲಂ ಅಲಿ ಜಲೀಲಮಿಯಾ, ಮೊಹಮ್ಮದ ಮಸೂದರ ರೆಹಮಾನ್ ಹಾಜಿ, ಸಬೀಬ ಶೇಖ್ ಮನ್ಸೂರಾಲಿ, ರಿಜಾವುಲ್ ಹಕ್ ಮಂಜೂರಾಲಿ, ಶಮೀಮ ಶೇಖ್, ಮೊಹಮ್ಮದ ಆರೀಫ್, ಮೊಹಮ್ಮದ ರಬಿವುಲ್ ಹಕ್ ಎಂಬುವರನ್ನು ಉಪನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.