ಜಿಲ್ಲೆ

11 ವಿಚಾರಣಾಧೀನ ಕೈದಿಗಳ ಬಿಡುಗಡೆ

ಹುಬ್ಬಳ್ಳಿ: ವಿಶ್ವೇಶ್ವರ ನಗರದ ಉಪ ಕಾರಾಗೃಹದ ಆಯ್ದ 11 ವಿಚಾರಣಾಧೀನ ಕೈದಿಗಳನ್ನು ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.

ಧಾರವಾಡದ ಕೇಂದ್ರ ಕಾರಾಗೃಹದಲ್ಲಿ ಜಿಲ್ಲಾ ಮಟ್ಟದ ಸಮಿತಿ ಬಳಿ 7 ವರ್ಷದವರೆಗೆ ಶಿಕ್ಷೆಯಾಗಬಹುದಾದ ಪ್ರಕರಣಗಳಲ್ಲಿ ವಿಚಾರಣೆ ಎದುರಿಸುತ್ತಿರುವ ಒಟ್ಟು 34 ವಿಚಾರಣಾ ಕೈದಿಗಳ ಪಟ್ಟಿ ಸಲ್ಲಿಸಲಾಗಿತ್ತು. ಅದರಲ್ಲಿ 23 ಜನರನ್ನು ಅನರ್ಹಗೊಳಿಸಿ, 11 ಜನರನ್ನು ಬಿಡುಗಡೆ ಮಾಡಲು ಅನುಮತಿ ನೀಡಲಾಗಿತ್ತು. ಧಾರವಾಡದ 1ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರ ಆದೇಶದಂತೆ 11 ಕೈದಿಗಳನ್ನು ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಕಾರಾಗೃಹ ಅಧೀಕ್ಷಕ ಅಶೋಕ ಭಜಂತ್ರಿ ‘ವಿಜಯವಾಣಿ’ಗೆ ತಿಳಿಸಿದ್ದಾರೆ.