ಶಿವಮೊಗ್ಗ: ಶಿವಮೊಗ್ಗ ಸಿಇಎನ್ ಕ್ರೈಂ ಠಾಣೆ ಪೊಲೀಸರು ಸಿಇಐಆರ್(ಸೆಂಟ್ರಲ್ ಇಕ್ಯೂಪ್ಮೆಂಟ್ ಐಡೆಂಟಿಟಿ ರಿಜಿಸ್ಟಾರ್) ಪೋರ್ಟಲ್ ಬಳಸಿ ಕಳೆದುಹೋಗಿದ್ದ 16.35 ಲಕ್ಷ ರೂ. ಮೌಲ್ತದ 110 ಮೊಬೈಲ್‌ಗಳನ್ನು ಪತ್ತೆ ಮಾಡಿ ವಾರಸುದಾರರಿಗೆ ಮಂಗಳವಾರ ಹಸ್ತಾಂತರಿಸಿದರು.
ನಗರದ ಡಿಎಆರ್ ಸಭಾಂಗಣದಲ್ಲಿ ಮಂಗಳವಾರ ಸಂಜೆ ಮೊಬೈಲ್ ಹಸ್ತಾಂತರಿಸಿ ಮಾತನಾಡಿದ ಎಸ್‌ಪಿ ಜಿ.ಕೆ.ಮಿಥುನ್‌ಕುಮಾರ್, ಕೇಂದ್ರ ಸರ್ಕಾರದ ದೂರ ಸಂಪರ್ಕ ಇಲಾಖೆ ಸಹಯೋಗದಲ್ಲಿ ಕಳೆದುಹೋಗಿದ್ದ ಮೊಬೈಲ್‌ಗಳನ್ನು ಪತ್ತೆ ಮಾಡುವ ಉದ್ದೇಶದಿಂದ ಸಿಇಐಆರ್ ಪೋರ್ಟಲ್ ಅನ್ನು ಜಾರಿಗೆ ತಂದಿದ್ದು, ಕಳೆದ ಮೂರು ತಿಂಗಳಲ್ಲಿ ಕಳೆದುಹೋಗಿದ್ದ 110 ಮೊಬೈಲ್‌ಗಳನ್ನು ಪತ್ತೆ ಮಾಡಲಾಗಿದೆ ಎಂದರು.
ಸಿಇಎನ್ ಠಾಣೆ ಡಿವೈಎಸ್‌ಪಿ ಕೆ.ಕೃಷ್ಣಮೂರ್ತಿ ನೇತೃತ್ವದಲ್ಲಿ ಇನ್‌ಸ್ಪೆಕ್ಟರ್ ಮಂಜುನಾಥ ಹಾಗೂ ಸಿಬ್ಬಂದಿಗಳನ್ನೊಳಗೊಂಡ ತಂಡವು ಸಿಇಐಆರ್ ತಂಡ 110 ಮೊಬೈಲ್ ಫೋನ್‌ಗಳನ್ನು ಪತ್ತೆ ಮಾಡಿದ್ದು, ವಾರಸುದಾರರಿಗೆ ಹಿಂದಿರುಗಿಸಲಾಯಿತು. ಜಿಲ್ಲೆಯಲ್ಲಿ ಇದುವರೆಗೆ ಸಿಇಐಆರ್ ಪೋರ್ಟಲ್ ಸಹಾಯದಿಂದ 1000ಕ್ಕೂ ಮೊಬೈಲ್ ಫೋನ್‌ಗಳನ್ನು ಪತ್ತೆ ಮಾಡಿ ಸಂಬಂಧಪಟ್ಟ ವಾರಸುದಾರರಿಗೆ ಹಿಂದಿರುಗಿಸಲಾಗಿದೆ ಎಂದರು.
ಎಎಸ್‌ಪಿಗಳಾದ ಅನಿಲ್‌ಕುಮಾರ್ ಭೂಮರಡ್ಡಿ, ಎ.ಜಿ.ಕಾರಿಯಪ್ಪ, ಸಿಇಎನ್ ಠಾಣೆ ಡಿವೈಎಸ್‌ಪಿ ಕೆ.ಕೃಷ್ಣಮೂರ್ತಿ ಉಪಸ್ಥಿತರಿದ್ದರು.