ಜಿಲ್ಲೆ

11ರಂದು ದುರ್ಗಕ್ಕೆ ಅಖಿಲೇಶ್‌ಯಾದವ್

ಚಿತ್ರದುರ್ಗ: ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್‌ಯಾದವ್ ಅವರ ನೇತೃತ್ವದಲ್ಲಿ ನ.11ರಿಂದ ಎರಡು ದಿನಗಳ ಕಾಲ ನಗರದ ಖಾಸಗಿ ಹೋಟೆಲ್‌ನಲ್ಲಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಲಿದೆ ಎಂದು ಸಮಾಜವಾದಿ ಪಕ್ಷದ ಜಿಲ್ಲಾಧ್ಯಕ್ಷ ಎಸ್.ಲಕ್ಷ್ಮೀಕಾಂತ್ ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹಿಂದುಳಿದವರು,ದಲಿತರು, ಅಲ್ಪಸಂಖ್ಯಾತರನ್ನು ರಾಜ್ಯ ಸರ್ಕಾರ ನಿರ್ಲಕ್ಷಿಸುತ್ತಿ ರುವುದರ(ಪಿಡಿಎ)ವಿರುದ್ಧ ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕಾರ್ಯಕರ್ತರಿಗೆ ಮಾರ್ಗದರ್ಶನ ನೀಡಲಿದ್ದಾರೆ ಎಂದು ತಿಳಿಸಿದರು.

ಸಮಾಜವಾದಿ ಪಕ್ಷ ಮಾನವೀಯತೆ, ಜಾತ್ಯತೀತತೆ, ಸಮಾನತೆ, ಪ್ರಜಾಪ್ರಭುತ್ವದ ಮೇಲೆ ನಿಂತಿದೆ. ಜಾತಿ, ವರ್ಗ ಭೇದವಿಲ್ಲದೆ ಎಲ್ಲರನ್ನೂ ಸಮಾನವಾಗಿ ಕಾಣುವುದು ಪಕ್ಷದ ಉದ್ದೇಶ. ಸಂಘಟನೆ ಮೂಲಕ ಮುಂಬರುವ ಚುನಾವಣೆಗಳಲ್ಲಿ ಗೆಲುವು ಸಾಧಿಸುವ ಗುರಿ ಪಕ್ಷದ್ದಾಗಿದೆ. ಈ ನಿಟ್ಟಿನಲ್ಲಿ ಅಖಿಲೇಶ್‌ಯಾದವ್ ಅವರ ಚಿತ್ರದುರ್ಗ ಭೇಟಿ ಮಹತ್ವದ್ದಾಗಿದೆ ಎಂದು ತಿಳಿಸಿದರು.

ಪಕ್ಷದ ಪ್ರಮುಖರಾದ ಎನ್.ಡಿ. ಗುರುಮೂರ್ತಿ, ತಿಪ್ಪೇಸ್ವಾಮಿ ಇದ್ದರು.