ಜಿಲ್ಲೆ

11ರಂದು ಸಾಮೂಹಿಕ ಪ್ರಾರ್ಥನೆಗೆ ವಿಹಿಂಪ ಕರೆ: ದ.ಕ, ಉಡುಪಿ, ಕಾಸರಗೋಡು ಜಿಲ್ಲೆಯಲ್ಲಿ ಆಯೋಜನೆ

ಮಂಗಳೂರು: ಸ್ವಾಮಿ ಕೊರಗಜ್ಜನ ವೇಷ ಹಾಕಿ ವಿಕೃತ ಸಂತೋಷ ಪಡುವ ಘಟನೆ ಲಕ್ಷಾಂತರ ಹಿಂದುಗಳ ಮನಸ್ಸಿಗೆ ನೋವನ್ನುಂಟು ಮಾಡಿದ್ದು, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ ಎಂದು ಜ.11ರಂದು ದ.ಕ, ಉಡುಪಿ, ಕಾಸರಗೋಡು ಜಿಲ್ಲೆಯಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಸಲು ವಿಶ್ವ ಹಿಂದು ಪರಿಷತ್ ಕರೆ ನೀಡಿದೆ.

ಪವಿತ್ರ ದೇವ, ದೈವಸ್ಥಾನಗಳನ್ನು ಅಪವಿತ್ರಗೊಳಿಸುವುದು, ಸಾಮಾಜಿಕ ಜಾಲತಾಣಗಳಲ್ಲಿ ನಿಂದನೆ ಇತ್ಯಾದಿಯ ಮುಂದುವರಿದ ಭಾಗವಾಗಿ ಈ ಘಟನೆ ನಡೆದಿದೆ. ಮುಂದೆ ಇಂತಹ ಘಟನೆಗಳು ನಡೆಯಬಾರದು. ಅದಕ್ಕಾಗಿ ಮೂರು ಜಿಲ್ಲೆಗಳ ಎಲ್ಲ ದೈವಸ್ಥಾನ, ದೇವಸ್ಥಾನ, ಭಜನಾ ಮಂದಿರಗಳಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಸಲು ವಿಹಿಂಪ ವಿನಂತಿಸಿದೆ. ದೈವಸ್ಥಾನ, ದೇವಸ್ಥಾನದ ಆಡಳಿತ ಮಂಡಳಿ, ಧಾರ್ಮಿಕ ಮುಖಂಡರು, ಸಂಘಟನೆಗಳು, ಸಂಘ ಸಂಸ್ಥೆಗಳು, ಭಕ್ತರು, ಸಮಸ್ತ ಹಿಂದುಗಳು ಜತೆಯಾಗಿ ತಮ್ಮ ಊರಿನ ದೈವಸ್ಥಾನ ದೇವಸ್ಥಾನ, ಭಜನಾ ಮಂದಿರಗಳಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಸಬೇಕೆಂದು ವಿಹಿಂಪ ವಿಭಾಗ ಕಾರ್ಯದರ್ಶಿ ಶರಣ್ ಪಂಪ್‌ವೆಲ್ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.