ಜಿಲ್ಲೆ

ನಿಂತಿದ್ದ ಲಾರಿಗೆ ಟಾಟಾ ಸುಮೋ ಡಿಕ್ಕಿ; ಮಗು ಸೇರಿದಂತೆ 12 ಮಂದಿ ಮೃತ್ಯು

ಚಿಕ್ಕಬಳ್ಳಾಪುರ: ನಿಂತಿದ್ದ ಸಿಮೆಂಟ್ ಬಲ್ಕರ್ ಲಾರಿಗೆ ಟಾಟಾ ಸುಮೋ ಡಿಕ್ಕಿ ಹೊಡೆದ ಪರಿಣಾಮ ಮಗು ಸೇರಿದಂತೆ 12 ಮಂದಿ ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಹೊರವಲಯದ ರಾಷ್ಟ್ರೀಯ ಹೆದ್ದಾರಿ 44 ರ ಚಿತ್ರಾವತಿ ಬಳಿ ನಡೆದಿದೆ.

ಆಂಧ್ರ ಪ್ರದೇಶದಿಂದ ಬೆಂಗಳೂರಿನತ್ತ ತೆರಳುವ ವೇಳೆ ದುರ್ಘಟನೆ ಸಂಭವಿಸಿದೆ. ಟಾಟಾ ಸುಮೋದಲ್ಲಿ ಒಟ್ಟು 12 ಜನರು ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ.

ಡಿಕ್ಕಿಯ ರಭಸಕ್ಕೆ ಟಾಟಾ ಸುಮೋ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿವೆ. ದಟ್ಟ ಮಂಜು ಆವರಿಸಿದ್ದರಿಂದ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಚಿಕ್ಕಬಳ್ಳಾಪುರ ಸಂಚಾರಿ ಠಾಣೆ ಪೊಳೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.