ಬೆಟ್ಟದಪುರ: ಬೆಟ್ಟದಪುರ ಸಮೀಪದ ಭುವನಹಳ್ಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಬುಧವಾರ ನರೇಗಾ ಕೂಲಿ ಕಾರ್ಮಿಕರಿಗೆ ಗ್ರಾಮ ಆರೋಗ್ಯ ಯೋಜನೆಯಡಿ ಉಚಿತವಾಗಿ ಆರೋಗ್ಯ ತಪಾಸಣೆ ಮಾಡಲಾಯಿತು.
ಶಿಬಿರದಲ್ಲಿ ಸುಮಾರು 120ಕ್ಕೂ ಹೆಚ್ಚು ಕೂಲಿ ಕಾರ್ಮಿಕರಿಗೆ ಮಧುಮೇಹ, ಕಫ ಪರೀಕ್ಷೆ ಸೇರಿದಂತೆ ವಿವಿಧ ತಪಾಸಣೆ ನಡೆಸಲಾಯಿತು. ಶಿಬಿರದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಮತಾ, ಪಿಡಿಒ ದೇವರಾಜ್, ಕರ್ನಾಟಕ ಹೆಲ್ತ್ ಪ್ರಮೋಷನ್ ಟ್ರಸ್ಟ್‌ನ ತಾಲೂಕು ಸಂಯೋಜಕಿ ಜ್ಯೋತಿ, ಪ್ರಾಥಮಿಕ ಮಹಿಳಾ ಆರೋಗ್ಯಾಧಿಕಾರಿ ಕೆ.ಆರ್.ಶಶಿ, ಸಮುದಾಯ ಆರೋಗ್ಯಾಧಿಕಾರಿ ಪುನೀತ್‌ಕುಮಾರ್, ಆಶಾ ಕಾರ್ಯಕರ್ತೆಯರಾದ ರುಕ್ಷ್ಮಿಣಿ, ಸಾವಿತ್ರಿ, ನಾಗಮಣಿ ಇತರರಿದ್ದರು.