ಮಾಂಜರಿ: ಚಿದಾನಂದ ಬಸಪ್ರಭು ಕೋರೆ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಬುಧವಾರ ಶ್ರೀಶೈಲ ಪೀಠದ ಜಗದ್ಗುರು ಡಾ. ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯರು, ನಿಡಸೋಸಿ ಸಿದ್ಧ ಸಂಸ್ಥಾನಮಠದ ನಿಜಲಿಂಗೇಶ್ವರ ದೇವರು ಹಾಗೂ ಕೆಎಲ್‌ಇ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ ಬಾಯ್ಲರ್ ಪ್ರದೀಪನಾ ಸಮಾರಂಭ ನೆರವೇರಿಸಿದರು.
ಕಾರ್ಖಾನೆ ಅಧ್ಯಕ್ಷ ಮಲ್ಲಿಕಾರ್ಜುನ ಕೋರೆ ಮಾತನಾಡಿ, ಕಾರ್ಖಾನೆ ನಿರಂತರವಾಗಿ ಪ್ರಗತಿ ಸಾಧಿಸುತ್ತಿದ್ದು, ಪ್ರಸಕ್ತ ಸಾಲಿನಲ್ಲಿ 15 ಲಕ್ಷ ಮೆ.ಟನ್. ಕಬ್ಬು ನುರಿಸಲಿದೆ. 13.50 ಕೋಟಿ ಯೂನಿಟ್ ವಿದ್ಯುತ್, 5 ಕೋಟಿ ಲೀಟರ್ ಎಥೆನಾಲ್ ಉತ್ಪಾದಿಸುವ ಗುರಿ ಹೊಂದಿದೆ ಎಂದರು.
ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ, ಕಾರ್ಖಾನೆ ಉಪಾಧ್ಯಕ್ಷರಾದ ತಾತ್ಯಾಸಾಹೇಬ ಕಾಟೆ, ಸಂಚಾಲಕರಾದ ಅಜೀತ ದೇಸಾಯಿ, ಭರತೇಶ ಬನವಣೆ, ಸಂದೀಪ ಪಾಟೀಲ, ಮಲ್ಲಪ್ಪ ಮೈಶಾಳೆ, ಚೇತನ ಪಾಟೀಲ, ಭೀಮಗೌಡಾ ಪಾಟೀಲ, ಮಹಾವೀರ ಕಾತ್ರಾಳೆ, ಅಣ್ಣಾಸಾಬ ಇಂಗಳೆ, ವ್ಯವಸ್ಥಾಪಕ ನಿರ್ದೇಶಕರಾದ ಡಾ.ಆರ್.ಬಿ. ಖಾಂಡಗಾವೆ, ಪರಸಗೌಡಾ ಪಾಟೀಲ ದಂಪತಿ ಇತರರಿದ್ದರು.