ಜಿಲ್ಲೆ

ವಿಟಿಯು ಘಟಿಕೋತ್ಸವದಲ್ಲಿ ಅತಿ ಹೆಚ್ಚು 13 ಚಿನ್ನದ ಪದಕ ಪಡೆದವರಾರು ಗೊತ್ತಾ?

ಬೆಳಗಾವಿ : ವಿಶ್ವೇಶ್ವರಯ್ಯ ತಾಂತ್ರಿಕ‌ ವಿಶ್ವವಿದ್ಯಾಲಯದ 23ನೇ ಘಟಿಕೋತ್ಸವದಲ್ಲಿ ರಾಜ್ಯಪಾಲ‌ ಥಾವರಚಂದ್ ಗೆಹ್ಲೋಟ್ ಅವರಿಂದ ಸರ್.ಎಂ.ವಿಶ್ವೇಶ್ವರಯ್ಯ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ’ನ ಮದಕಶಿರಾ ಚಿನ್ಮಯ ವಿಕಾಸ್ ಅವರು, ಸಿವಿಲ್ ಇಂಜಿನಿಯರಿಂಗ್ ವಿಭಾಗದಲ್ಲಿ ‘ 13 ಚಿನ್ನದ ಪದಕ ಪಡೆದು 2023-24ನೇ ಸಾಲಿನ ವಿಟಿಯು ಚಿನ್ನದ ವಿದ್ಯಾರ್ಥಿಯಾಗಿ ಹೊರಹೊಮ್ಮಿದರು.

ಮಂಗಳವಾರ ಬೆಳಗ್ಗೆ 11.30ಕ್ಕೆ ವಿಶ್ವವಿದ್ಯಾಲಯದ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ಸಭಾಂಗಣದಲ್ಲಿ ಆಯೋಜಿಸಿದ್ದ 23ನೇ ಘಟಿಕೋತ್ಸವದಲ್ಲಿ‌ ಮೆಕಾನಿಕಲ್ ಇಂಜಿನಿಯರಿಂಗ್ ವಿಭಾಗದಲ್ಲಿ ‘ಸರ್.ಎಂ.ವಿಶ್ವೇಶ್ವರಯ್ಯ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ’ನ ಅಭಿಷೇಕ ಜಿ. ಹಾಗೂ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್‌ನಲ್ಲಿ ಗುಡಿಕಲ್ ಸಾಯಿ ವಂಶಿ ಹಾಗೂ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್‌ನಲ್ಲಿ ಬಳ್ಳಾರಿ ಇನ್‌ಸ್ಟಿಟ್ಯೂಟ್ ಆಫ್  ಟೆಕ್ನಾಲಜಿಯ ಕೆ.ಆರ್.ಸಂಪತ್‌ಕುಮಾರ್ ತಲಾ ಏಳು ಪದಕ ಪಡೆದರು.

ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ ವಿಭಾಗದಲ್ಲಿ ಶಿವಮೊಗ್ಗದ ಜವಾಹರ್‌ಲಾಲ್ ನೆಹರು ನ್ಯಾಷನಲ್ ಕಾಲೇಜ್ ಆಫ್ ಇಂಜಿನಿಯರಿಂಗ್‌ನ ಪಾರ್ವತಿ ಸಲೇರಾ ಜೆ. 6 ಚಿನ್ನದ ಪದಕ ಪಡೆಯುವ ಮೂಲಕ ಅತಿ ಹೆಚ್ಚು ಚಿನ್ನದ ಪದಕ ಸಾಧನೆ ಮಾಡಿದ ವಿದ್ಯಾರ್ಥಿನಿಯಾಗಿದ್ದಾರೆ. ಕೆಮಿಕಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಬೆಳಗಾವಿಯಲ್ಲಿನ ಕೆಎಲ್‌ಇ ಡಾ.ಎಂ.ಎಸ್.ಶೇಷಗಿರಿ ಕಾಲೇಜ್ ಆಫ್ ಇಂಜಿನಿಯರಿಂಗ್‌ನ ಆವಂತಿಕಾ ಸಾವಕಾರ್ ಐದು, ಎಲೆಕ್ಟ್ರಾನಿಕ್ಸ್ ಇನ್ಸ್‌ಟ್ರುಮೆಂಟೇಶನ್ ಇಂಜಿನಿಯರಿಂಗ್‌ನಲ್ಲಿ ಬೆಂಗಳೂರಿನ ಆರ್‌ಎನ್‌ಎಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಹರ್ಷಿತಾ ಆರ್. ಹಾಗೂ ಇನ್ಫಾರ್ಮೇಷನ್ ಸೈನ್ಸ್ ಮತ್ತು ಇಂಜಿನಿಯರಿಂಗ್ ವಿಭಾಗದಲ್ಲಿ ಬೆಂಗಳೂರಿನ ಸಾಯಿ ವಿದ್ಯಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಇಶಿಕಾ ನವೀನ್ ತಲಾ ನಾಲ್ಕು ಚಿನ್ನದ ಪದಕ ಪಡೆದಿದ್ದಾರೆ. ಏರೋನಾಟಿಕಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಬೆಂಗಳೂರಿನ ಆಚಾರ್ಯ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಾಹಸ್ ಎಸ್. ಹಾಗೂ ಮೈನಿಂಗ್ ವಿಭಾಗದಲ್ಲಿ ಅದೇ ಕಾಲೇಜಿನ ಕೆಂಚೋ ಗೈಲಸ್ತೇನ್ ತಲಾ ಎರಡು ಚಿನ್ನದ ಪದಕ ಪಡೆದರು.

ಚಿನ್ನದ ಪದ ಸಾಧನೆ ಮಾಡಿದ ವಿದ್ಯಾರ್ಥಿಗಳು

ಘಟಿಕೋತ್ಸವದಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಹಾಗೂ ಐಐಟಿಎಂನ ನಿರ್ದೇಶಕ ವಿ.ಕಾಮಕೋಟಿ, ಕಲುಪತಿ ಎಸ್.ವಿದ್ಯಾಶಂಕರ ಸೇರಿದಂತೆ ಸಿಂಡಿಕೇಟ್ ಸದಸ್ಯರು‌ ಪಾಲ್ಗೊಂಡಿದ್ದರು