ಜಿಲ್ಲೆ

130 ಪ್ರಕರಣಗಳು ಪತ್ತೆ

Dharwad

ಧಾರವಾಡ: ಜಿಲ್ಲೆಯಲ್ಲಿ ಸೋಮವಾರ 130 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, 7 ಜನ ಮೃತಪಟ್ಟಿದ್ದಾರೆ. ಒಟ್ಟು ಪ್ರಕರಣಗಳ ಸಂಖ್ಯೆ 15888ಕ್ಕೇರಿದೆ. ಈವರೆಗೆ 13358 ಜನ ಗುಣವಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 2066 ಪ್ರಕರಣಗಳು ಸಕ್ರಿಯವಾಗಿವೆ. ಈವರೆಗೆ 457 ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದಾರೆ. ಈವರೆಗೆ 104925 ಜನರ ಗಂಟಲ ದ್ರವ ಮಾದರಿ ಪರೀಕ್ಷೆ ನಡೆಸಿದ್ದು, 102128 ವರದಿಗಳು ನೆಗೆಟಿವ್ ಬಂದಿದೆ. ಇನ್ನೂ 267 ವರದಿಗಳು ಬಾಕಿ ಇದೆ ಎಂದು ತಿಳಿಸಿದ್ದಾರೆ.