ಜಿಲ್ಲೆ

ಜಿಲ್ಲಾದ್ಯಂತ 132 ಪರೀಕ್ಷಾ ಕೇಂದ್ರ

ಮೈಸೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಮಾ.25 ರಿಂದ ಏ.6ರವರೆಗೆ 2023-24ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸುತ್ತಿದ್ದು, ಸುಗಮ ಪರೀಕ್ಷೆಯನ್ನು ನಡೆಸಲು ಜಿಲ್ಲಾದ್ಯಂತ 132 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ.

ನಗರದಲ್ಲಿ 35, ಗ್ರಾಮೀಣ ಪ್ರದೇಶದಲ್ಲಿ 97 ಪರೀಕ್ಷಾ ಕೇಂದ್ರ ತೆರೆಯಲಾಗಿದೆ. ಈ ಪೈಕಿ ಸರ್ಕಾರಿ ಶಾಲೆಯಲ್ಲಿ 74, ಅನುದಾನಿತ ಶಾಲೆಯಲ್ಲಿ 25 ಹಾಗೂ ಅನುದಾನರಹಿತ ಶಾಲೆಗಳಲ್ಲಿ 33 ಪರೀಕ್ಷಾ ಕೇಂದ್ರಗಳಿವೆ.

ಜಿಲ್ಲೆಯಲ್ಲಿ ಹೊಸಬರು ಮತ್ತು ಪುನರಾವರ್ತಿತರು ಸೇರಿದಂತೆ 40,333 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಈ ಪೈಕಿ ಬಾಲಕಿಯರ ಸಂಖ್ಯೆಯೇ ಹೆಚ್ಚಾಗಿದೆ. 20,046 ಬಾಲಕರು ಹಾಗೂ 20,287 ಬಾಲಕಿಯರು ಪರೀಕ್ಷೆ ಬರೆಯಲಿದ್ದಾರೆ.

ಇದರಲ್ಲಿ 38,567 ರೆಗ್ಯುಲರ್ ವಿದ್ಯಾರ್ಥಿಗಳು, 829 ರೆಗ್ಯುಲರ್ ಪುನರಾವರ್ತಿತ ವಿದ್ಯಾರ್ಥಿಗಳು, 634 ಖಾಸಗಿ ವಿದ್ಯಾರ್ಥಿಗಳು ಹಾಗು 303 ಖಾಸಗಿ ಪುನರಾವರ್ತಿತ ವಿದ್ಯಾರ್ಥಿಗಳು ಇದ್ದಾರೆ.