ಪ್ರಧಾನಿ ಮೋದಿ ಜನ್ಮದಿನದ ಪ್ರಯುಕ್ತ ರಾಮದುರ್ಗ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಏರ್ಪಡಿಸಿದ್ದ ರಕ್ತದಾನ ಶಿಬಿರದಲ್ಲಿ ಶಾಸಕ ಮಹಾದೇವಪ್ಪ ಯಾದವಾಡ ಮಾತನಾಡಿದರು. ರಾಜೇಶ ಬೀಳಗಿ, ಡಾ. ನಿರ್ಮಲಾ ಹಂಜಿ. ಮಲ್ಲಣ್ಣ ಯಾದವಾಡ ಇತರರಿದ್ದರು. 
ಜಿಲ್ಲೆ

ವಿಶ್ವಕಂಡ ಅಪ್ರತಿಮ ನಾಯಕ ನಮೋ

ರಾಮದುರ್ಗ, ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವಕಂಡ ಅಪ್ರತೀಮ ನಾಯಕ. ಹಿಂದೆ ವಿದೇಶಕ್ಕೆ ಭಾರತದ ಪ್ರಧಾನಿಗಳು ಹೋದಲ್ಲಿ ಸರಿಯಾದ ಗೌರವ ಆತಿಥ್ಯ ದೊರೆಯುತ್ತಿರಲಿಲ್ಲ. ಮೋದಿ ಅವರನ್ನು ವಿವಿಧ ರಾಷ್ಟ್ರಗಳು ವಿಶೇಷ ಆಹ್ವಾನ ನೀಡಿ, ರತ್ನಕಂಬಳಿ ಕೊಡುಗೆಯೊಂದಿಗೆ ಸ್ವಾಗತಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದು ಶಾಸಕ ಮಹಾದೇವಪ್ಪ ಯಾದವಾಡ ಹೇಳಿದರು.

ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ 72ನೇ ಜನ್ಮದಿನದ ಪ್ರಯುಕ್ತ ಶನಿವಾರ ಏರ್ಪಡಿಸಿದ್ದ ರಕ್ತದಾನ ಶಿಬಿರ ಹಾಗೂ ಒಳರೋಗಿಗಳಿಗೆ ಹಣ್ಣು ಬ್ರೇಡ್ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಬಿಜೆಪಿ ಮಂಡಲ ಅಧ್ಯಕ್ಷ ರಾಜೇಶ ಬೀಳಗಿ ಮಾತನಾಡಿ, ವಿಶ್ವನಾಯಕರಾದ ನರೇಂದ್ರ ಮೋದಿ ಅವರ ಜನ್ಮದಿನವನ್ನು ತಾಲೂಕಿನಲ್ಲಿ ವಿವಿಧ ಸೇವಾ ಕಾರ್ಯಗಳನ್ನು ಮಾಡುವ ವಿಶಿಷ್ಟವಾಗಿ ಆಚರಣೆ ಮಾಡಲಾಗುತ್ತಿದೆ.
ಬಿಜೆಪಿ ವಿವಿಧ ಮೋರ್ಚಾಗಳ ಸಹಭಾಗಿತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದರು. ಸರ್ಕಾರಿ ಆಸ್ಪತ್ರೆ ಮಖ್ಯ ವೈದ್ಯಾಧಿಕಾರಿ ಡಾ. ನಿರ್ಮಲಾ ಹಂಜಿ, ರಕ್ತದಾನದಿಂದ ಆಗುವ ಪ್ರಯೋಜನಗಳ ಕುರಿತು ಮಾಹಿತಿ ನೀಡಿದರು.

ಧನಲಕ್ಷ್ಮೀ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಮಲ್ಲಣ್ಣ ಯಾದವಾಡ, ಪುರಸಭೆ ಅಧ್ಯಕ್ಷ ರಘುನಾಥ ರೇಣಕೆ, ಉಪಾಧ್ಯಕ್ಷ ನಾಗರಾಜ ಕಟ್ಟಿಮನಿ, ಬಿಜೆಪಿ ತಾಲೂಕು ಪ್ರಧಾನ ಕಾರ್ಯದರ್ಶಿ ಶಂಕರ ಹುರಕಡ್ಲಿ ಹಾಗೂ ಉಮೇಶ ಹಕಾಟಿ, ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ನಿಂಗನಗೌಡ ಪಾಟೀಲ, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಬಸವರಾಜ ಹಳ್ಳಿ, ಅಕ್ಷಯ ಹಲ್ಯಾಳ ಇತರರು ಇದ್ದರು.