ಚಾಮರಾಜನಗರ: ಲೋಕಾಯುಕ್ತ ಅಧಿಕಾರಿಗಳು ನ.13 ರಂದು ಹನೂರು ಪ್ರವಾಸಿ ಮಂದಿರದಲ್ಲಿ ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆವರೆಗೆ ಸಾರ್ವಜನಿಕರಿಂದ ದೂರು ಅರ್ಜಿಗಳನ್ನು ಸ್ವೀಕರಿಸಿ ವಿಚಾರಣೆ ನಡೆಸಲಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ಕಚೇರಿ ಕೆಲಸಗಳ ಅನಗತ್ಯ ವಿಳಂಬ ಹಾಗೂ ಇನ್ನಿತರ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ, ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗದಿತ ನಮೂನೆ-1 ಮತ್ತು 2ರಲ್ಲಿ ನೀಡಬಹುದು. ಸಾರ್ವಜನಿಕರು ಈ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಪೊಲೀಸ್ ಉಪಾಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.