ಜಿಲ್ಲೆ

ಜಿಲ್ಲೆಯಲ್ಲಿ ೧೪.೫೩ ಮಿ.ಮೀ. ಮಳೆ

ಆದರ್ಶ್. ಎಂ.ಕೆ.

ಮಡಿಕೇರಿ: ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ ೮.೩೦ಕ್ಕೆ ಕೊನೆಗೊಂಡಂತೆ ಕಳೆದ ೨೪ ಗಂಟೆ ಅವಧಿಯಲ್ಲಿ ಸರಾಸರಿ ೧೪.೫೩ ಮಿ.ಮೀ. ಮಳೆಯಾಗಿದೆ.


ಮಡಿಕೇರಿ ತಾಲೂಕಿನಲ್ಲಿ ಸರಾಸರಿ ೧೮.೦೫ ಮಿ.ಮೀ., ವಿರಾಜಪೇಟೆ ತಾಲೂಕಿನಲ್ಲಿ ಸರಾಸರಿ ೦.೪೧ ಮಿ.ಮೀ., ಸೋಮವಾರಪೇಟೆ ತಾಲೂಕಿನಲ್ಲಿ ಸರಾಸರಿ ೨೫.೧೩ ಮಿ.ಮೀ. ಮಳೆಯಾಗಿದೆ. ಜಿಲ್ಲೆಯ ಹೋಬಳಿವಾರುಗಳಾದ ನಾಪೋಕ್ಲು ೪೪.೨೦, ಸಂಪಾಜೆ ೨೦, ಭಾಗಮಂಡಲ ೮, ಅಮ್ಮತಿ ೨.೫೦, ಸೋಮವಾರಪೇಟೆ ಕಸಬಾ ೯೦, ಶನಿವಾರಸಂತೆ ೧೪.೮೦, ಶಾಂತಳ್ಳಿ ೪೫, ಕೊಡ್ಲಿಪೇಟೆ ೧ ಮಿ.ಮೀ.ಮಳೆಯಾಗಿದೆ.


ಹಾರಂಗಿ ಜಲಾಶಯದ ಗರಿಷ್ಠ ಮಟ್ಟ ೨೮೫೯ ಅಡಿಗಳಿದ್ದು, ಸೋಮವಾರ ೨೮೫೬.೩೫ ಅಡಿ ನೀರು ಸಂಗ್ರವಾಗಿದೆ. ಇಂದಿನ ನೀರಿನ ಒಳಹರಿವು ೨೨೦೨ ಕ್ಯುಸೆಕ್ ಇದ್ದು, ನೀರಿನ ಹೊರ ಹರಿವು ನದಿಗೆ ೧೦೦೦, ನಾಲೆಗೆ ೧೫೦ ಕ್ಯುಸೆಕ್ ನೀರುಬಿಡಲಾಗುತ್ತಿದೆ.