ಜಿಲ್ಲೆ

14 ರಿಂದ 70ನೇ ಅಖಿಲ ಭಾರತ ಸಹಕಾರ ಸಪ್ತಾಹ

ಚಿತ್ರದುರ್ಗ:ಸಹಕಾರ ಇಲಾಖೆ, ರಾಜ್ಯಸಹಕಾರ ಮಹಾಮಂಡಳ, ಜಿಲ್ಲಾ ಸಹಕಾರ ಯೂನಿಯನ್ ಹಾಗೂ ಜಿಲ್ಲೆಯ ಸಹಕಾರ ಸಂ ಘಗಳು ಮತ್ತು ಬ್ಯಾಂಕ್‌ಗಳ ಸಂಯುಕ್ತಾಶ್ರಯದಲ್ಲಿ 70ನೇ ಅಖಿಲ ಭಾರತ ಸಹಕಾರ ಸಪ್ತಾಹ ಅಂಗವಾಗಿ ನ.14ರಿಂದ 20ರವರೆಗೆ 7ದಿನ ಗ ಳು ಸಹಕಾರ ಸಪ್ತಾಹ ಆಚರಿಸಲಾಗುತ್ತಿದೆ. 14 ರಂದು ಬೆಳಗ್ಗೆ 11ಕ್ಕೆ ನಗರದ ಸಹಕಾರ ಭವನದಲ್ಲಿ ಶಾಸಕ ಕೆ.ಸಿ.ವೀರೇಂದ್ರಪಪ್ಪಿ ಅವರು ಸಪ್ತಾಹಕ್ಕೆ ಚಾಲನೆ ನೀಡಲಿದ್ದಾರೆ. ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಜೆ. ಶಿವಪ್ರಕಾಶ್ ಅಧ್ಯಕ್ಷತೆ ವಹಿಸಲಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಚಳ್ಳಕೆರೆ ಶಾಸಕ ಟಿ.ರಘಮೂರ್ತಿ ಮತ್ತಿತರ ಸಹಕಾರಿ ಧುರೀಣರು, ಸಿಡಿಸಿಸಿ ಬ್ಯಾಂಕ್ ವ್ಯವ ಸ್ಥಾಪಕ ನಿರ್ದೇಶಕ ಇಲ್ಯಾಸ್‌ಉಲ್ಲಾ ಷರೀಫ್ ಸೇರಿದಂತೆ ನಾನಾ ಅಧಿಕಾರಿಗಳು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. 14ರಿಂದ 20ರವ ರೆಗೆ ಜಿಲ್ಲಾದ್ಯಂತ ವಿವಿಧ ಕಾರ‌್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಸಹಕಾರ ಯೂನಿಯನ್ ಸಿಇಒ ನಾಗರಾಜ ಪಾಟೀಲ್ ತಿಳಿಸಿದ್ದಾರೆ.