ಜಿಲ್ಲೆ

15ರಿಂದ ಸುತ್ತೂರಿನಲ್ಲಿ ಶಿಬಿರ

ಅವಿನಾಶ್ ಜೈನಹಳ್ಳಿ

ಮೈಸೂರು: ಸುತ್ತೂರು ಶ್ರೀ ಮಠ, ಜೆಎಸ್‌ಎಸ್ ಮಹಾವಿದ್ಯಾಪೀಠ ಹಾಗೂ ಶ್ರೀ ಶಿವರಾತ್ರೀಶ್ವರ ಧಾರ್ಮಿಕ ದತ್ತಿಗಳ ಸಂಯುಕ್ತಾಶ್ರಯದಲ್ಲಿ ಏ.15 ರಿಂದ 17 ರವರೆಗೆ ಸುತ್ತೂರು ಶ್ರೀ ಕ್ಷೇತ್ರದಲ್ಲಿ ಆಯುರ್ವೇದ, ವಾಕ್-ಶ್ರವಣ ಸಂಸ್ಥೆ ಹಾಗೂ ನರ್ಸಿಂಗ್ ವಿದ್ಯಾರ್ಥಿಗಳ ಶಿಬಿರವನ್ನು ಏರ್ಪಡಿಸಲಾಗಿದೆ.

ಪ್ರತಿನಿತ್ಯ ಸಾಮೂಹಿಕ ಪ್ರಾರ್ಥನೆ, ಯೋಗ, ವಿಶೇಷ ಉಪನ್ಯಾಸಗಳು, ಚಿಂತನ-ಮಂಥನ, ದೇಸಿ ಆಟಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಇರುತ್ತವೆ. ಶಿಬಿರದಲ್ಲಿ ಭಾಗವಹಿಸಲು ಇಚ್ಛೆಯುಳ್ಳವರು ಬಿ. ರಾಜೇಶ್ ಅವರನ್ನು ಮೈಸೂರಿನ ಜೆಎಸ್‌ಎಸ್ ಮಹಾವಿದ್ಯಾಪೀಠದ ಪ್ರಕಟಣಾ ವಿಭಾಗದಲ್ಲಿ ನೇರವಾಗಿ ಅಥವಾ ದೂ. 0821-2548212 ಮೂಲಕ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.