ಜಿಲ್ಲೆ

15 ರಂದು ಜಿಲ್ಲಾ ಮಟ್ಟದ ಯುವಜನೋತ್ಸವ ಸ್ಪರ್ಧೆ

ಚಿತ್ರದುರ್ಗ: ಜಿಲ್ಲಾಡಳಿತ, ಜಿಪಂ, ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ ಹಾಗೂ ಶ್ರೀ ಮದಕರಿ ವಿದ್ಯಾಸಂಸ್ಥೆಯಿಂದ ನಗರದ ಮಹಾರಾಣಿ ಕಾಲೇಜಿನಲ್ಲಿ ಅ.15 ರಂದು ಜಿಲ್ಲಾ ಮಟ್ಟದ ಯುವಜನೋತ್ಸವ ಹಮ್ಮಿಕೊಳ್ಳಲಾಗಿದೆ. 15 ರಿಂದ 29 ವರ್ಷದೊಳಗಿನ ಜಿಲ್ಲೆಯ ಸಂಘ-ಸಂಸ್ಥೆಗಳ ಪ್ರತಿನಿಧಿಗಳು, ಶಾಲಾ, ಕಾಲೇಜು ವಿದ್ಯಾರ್ಥಿಗಳು, ಯುವಜನರು ಭಾಗವಹಿಸಬಹುದು. ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆ ದವರು ರಾಜ್ಯ ಮಟ್ಟದ ಯುವಜನೋತ್ಸವದಲ್ಲಿ ಭಾಗವಹಿಸಬಹುದು. ಜನಪದ ನೃತ್ಯ, ಗೀತೆ ಗಾಯನ, ಹಿಂದಿ, ಆಂಗ್ಲ ಹಾಗೂ ಪ್ರಾದೇಶಿಕ ಭಾಷೆಗಳಲ್ಲಿ ಕಥೆ, ಕವಿತೆ ಬರೆಯುವ, ಚಿತ್ರಕಲೆ, ಹಿಂದಿ, ಇಂಗ್ಲಿಷ್ ಭಾಷಣ ಸ್ಪರ್ಧೆ ಹಾಗೂ ರಾಜ್ಯಮಟ್ಟದಲ್ಲಿ ವಿಜ್ಞಾನ ಮೇಳ ಪ್ರದರ್ಶನ ಏರ್ಪಡಿಸಲಾಗಿದೆ ಎಂದು ಕ್ರೀಡಾ ಇಲಾಖೆ ಪ್ರಕಟಣೆ ತಿಳಿಸಿದೆ.