ಜಿಲ್ಲೆ

15ನೇ ವರ್ಷದ ಸಂಸ್ಥಾಪನಾ ದಿನ

ಬಳ್ಳಾರಿ : ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ 15ನೇ ಸಂಸ್ಥಾಪನಾ ದಿನವನ್ನು ಇಂದು ಶನಿವಾರದಂದು ಬೆಳಿಗ್ಗೆ 09 ಗಂಟೆಗೆ ವಿಶ್ವವಿದ್ಯಾಲಯದ ಬಯಲು ರಂಗಮಂದಿರ ಆವರಣದಲ್ಲಿ ಆಯೋಜಿಸಲಾಗಿದೆ. ಗದಗ ಮತ್ತು ವಿಜಯನಗರ ಜಿಲ್ಲೆಯ ರಾಮಕೃಷ್ಣ ವಿವೇಕಾನಂದ ಆಶ್ರಮ ಅಧ್ಯಕ್ಷ ಸ್ವಾಮಿ ನಿರ್ಭಯಾನಂದ ಸರಸ್ವತಿ ದಿವ್ಯಸಾನಿಧ್ಯ ವಹಿಸಿವರು. ಕುಲಪತಿ ಪ್ರೊ.ಜೆ. ತಿಪ್ಪೇರುದ್ರಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಕೊಪ್ಪಳ ವಿವಿ ಕುಲಪತಿ ಪ್ರೊ.ಬಿ.ಕೆ.ರವಿ, ವಿಜಯಪುರ ಅಕ್ಕ ಮಹಾದೇವಿ ಮಹಿಳಾ ವಿವಿ ಕುಲಪತಿ ಪ್ರೊ. ಬಿ.ಕೆ. ತುಳಸಿಮಾಲ, ಹಾವೇರಿಯ ಕರ್ನಾಟಕ ಜನಪದ ವಿವಿ ಕುಲಪತಿ ಪ್ರೊ.ಟಿ.ಎಂ. ಭಾಸ್ಕರ, ಡಿಸಿ ಪ್ರಶಾಂತ್‌ಕುಮಾರ್ ಮಿಶ್ರಾ, ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ, ಎಸ್ಪಿ ಡಾ.ವಿ.ಜೆ.ಶೋಭಾರಾಣಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂದೀಪ್ ಹಿಂದುರಾವ್ ಸೂರ್ಯವಂಶಿ ಹಾಗೂ ವಿಎಸ್‌ಕೆ ವಿವಿಯ ವಿಶ್ರಾಂತ ಕುಲಪತಿಗಳಾದ ಪ್ರೊ.ಮಂಜಪ್ಪ ಡಿ.ಹೊಸಮನೆ, ಪ್ರೊ.ಎಮ್.ಎಸ್.ಸುಭಾಷ್, ಪ್ರೊ.ಸಿದ್ದು ಪಿ.ಆಲಗೂರು ಸೇರಿದಂತೆ ಮಾಜಿ ಕುಲಸಚಿವರು, ಹಣಕಾಸು ಅಧಿಕಾರಿ ಹಾಗೂ ವಿವಿಯ ಸಿಂಡಿಕೇಟ್ ಮತ್ತು ವಿದ್ಯಾವಿಷಯಕ ಪರಿಷತ್ತಿನ ಸದಸ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.