ಜಿಲ್ಲೆ

ಮರಕ್ಕೆ ಕ್ರೂಸರ್ ಡಿಕ್ಕಿಯಾಗಿ 16 ಜನರಿಗೆ ಗಾಯ

ಮಂಜುನಾಥ ಅಂಗಡಿ

ವಿಜಯವಾಣಿ ಸುದ್ದಿಜಾಲ ಧಾರವಾಡ

ನಗರ ಹೊರವಲಯದ ಕ್ಯಾರಕೊಪ್ಪ ಬಳಿ ಕ್ರೂಸರ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 16 ಜನರು ಗಾಯಗೊಂಡ ಘಟನೆ ಶನಿವಾರ ಸಂಜೆ ನಡೆದಿದೆ. ಈ ಪೈಕಿ ಮೂವರ ಸ್ಥಿತಿ ಚಿಂತಾಜನಕವಾಗಿದೆ. ನಗರದ ಹೊಸಯಲ್ಲಾಪುರ ನಿವಾಸಿಗಳು ಕ್ರೂಸರ್ ವಾಹನದಲ್ಲಿ ಸಂಬAಽಕರ ಅಂತಿಮ ಸಂಸ್ಕಾರಕ್ಕಾಗಿ ಕಲಕೇರಿಗೆ ಹೋಗುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ವಾಹನ ಮರಕ್ಕೆ ಡಿಕ್ಕಿ ಹೊಡೆದಿದೆ. ಗಾಯಗೊಂಡ ಮೂವರನ್ನು ಹುಬ್ಬಳ್ಳಿಯ ಕಿಮ್ಸ್ಗೆ, ಉಳಿದವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.