ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ, ಸಚಿವ ಸಂಪುಟ ಸಭೆ ಸೇರಿ ವಿವಿಧ ಕಾರ್ಯಕ್ರಮ, ಸಭೆಗಳಲ್ಲಿ ಭಾಗವಹಿಸಲು ಜಿಲ್ಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೆ.೧೬ರಂದು ಆಗಮಿಸಲಿದ್ದಾರೆ. ಸೆ.೧೬ರಂದು ಮಧ್ಯಾಹ್ನ ೪.೧೦ ನಿಮಿಷಕ್ಕೆ ವಿಶೇಷ ವಿಮಾನದ ಮೂಲಕ ನಗರಕ್ಕೆ ಆಗಮಿಸಲಿದ್ದು, ಸಂಜೆ ೫ಕ್ಕೆ ಕವಲಗಾ (ಕೆ) ಗ್ರಾಮದಲ್ಲಿ ನಡೆಯಲಿರುವ ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ೧೭ರಂದು ಬೆಳಗ್ಗೆ ೮.೪೫ಕ್ಕೆ ಸರ್ದಾರ್ ವಲ್ಲಭಬಾಯಿ ಪಟೇಲ್ ವೃತ್ತದಲ್ಲಿ ಪಟೇಲರ ಪುತ್ಥಳಿಗೆ ಪುಷ್ಪಾರ್ಚನೆ ಮಾಡಲಿದ್ದಾರೆ. ೯ಗಂಟೆಗೆ ಪೊಲೀಸ್ ಪರೇಡ್ ಮೈದಾನದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ನಿಮಿತ್ತ ರಾಷ್ಟçಧ್ವಜಾರೋಹಣ ನೆರವೇರಿಸಲಿದ್ದಾರೆ. ಸಂಜೆ ೪ಗಂಟೆಗೆ ಸಚಿವ ಸಂಪುಟ ಸಭೆಯಲ್ಲಿ ಪಾಲ್ಗೊಂಡು, ಸಂಜೆ ೭ಕ್ಕೆ ವಿಮಾನ ಮೂಲಕ ಬೆಂಗಳೂರಿಗೆ ಹೋಗಲಿದ್ದಾರೆ.