ಜಿಲ್ಲೆ

17 ರಂದು ಬೃಹತ್ ಉದ್ಯೋಗ ಮೇಳ

ಕೆ.ಆರ್.ನಗರ: ಲೀಡರ್ ಟ್ರೈನಿಂಗ್ ಆ್ಯಂಡ್ ಕಾರ್ಪೋರೇಟ್ ಸಲ್ಯೂಷನ್‌ನಿಂದ ಜೂ.17ರಂದು ಬೆಳಗ್ಗೆ 9.30ರಿಂದ ಸಂಜೆ 5.30ರವರೆಗೆ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ಸಂಸ್ಥೆ ಸಿಇಒ ಎಂ.ಆರ್.ಶ್ರೀವಿದ್ಯಾ ಹೇಳಿದರು.

ಮೈಸೂರು ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಮ್ಯಾನೇಜ್ಮೆಂಟ್ ವತಿಯಿಂದ ಕಾಲೇಜಿನಲ್ಲಿ ಮೇಳ ಆಯೋಜಿಸಲಾಗಿದೆ. ಕೋವಿಡ್ ನಂತರ ಉದ್ಯೋಗಾವಕಾಶಗಳು ಹೆಚ್ಚಾಗಿದ್ದು ಸೂಕ್ತ ಅಭ್ಯರ್ಥಿಗಳಿಗಾಗಿ ಸಾಕಷ್ಟು ಅವಕಾಶಗಳು ಇರುವುದನ್ನು ಅರಿತು ನಮ್ಮ ಸಂಸ್ಥೆ ಮೇಳ ಆಯೋಜಿಸಿದೆ. 35 ರಿಂದ 40 ಕಂಪನಿಗಳು ಮೇಳದಲ್ಲಿ ಪಾಲ್ಗೊಳ್ಳಲಿವೆ. ಸಾಕಷ್ಟು ನಿರುದ್ಯೋಗಿಗಳಿಗೆ ಉದ್ಯೋಗ ಸಿಗಲಿದ್ದು, ಇದರ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಎಸ್‌ಎಸ್‌ಎಲ್‌ಸಿಯಿಂದ ಸ್ನಾತಕೋತ್ತರ ಪದವಿ, ಡಿಪ್ಲೊಮಾ ವ್ಯಾಸಂಗ ಮಾಡಿದವರಿಗೆ ಅವಕಾಶ ಕಲ್ಪಿಸಲಾಗಿದೆ. ಮೇಳದಲ್ಲಿ 600ಕ್ಕೂ ಹೆಚ್ಚು ಮಂದಿಯನ್ನು ಆಯ್ಕೆ ಮಾಡಲಾಗುತ್ತದೆ. ಈ ಭಾಗದ ನಿರುದ್ಯೋಗಿ ಯುವಕ, ಯುವತಿಯರು ಭಾಗವಹಿಸಿ ಇದರ ಉಪಯೋಗ ಪಡೆದುಕೊಳ್ಳಬೇಕು ಎಂದರು.

ಮೇಳ ನಡೆಯುವ ಸ್ಥಳಕ್ಕೆ ತೆರಳಲು ಮೈಸೂರು ಬಸ್ ನಿಲ್ದಾಣದಿಂದ ಉಚಿತವಾಗಿ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ. 9731434074 ಮತ್ತು 9742472777 ಸಂಪರ್ಕಿಸುವಂತೆ ಹೇಳಿದರು.

ಸಂಸ್ಥೆಯ ಸಹಾಯಕ ಪ್ರಾಧ್ಯಾಪಕ ಕೆ.ಎಂ.ರವಿಶಂಕರ್ ಸುದ್ದಿಗೋಷ್ಠಿಯಲ್ಲಿ ಇದ್ದರು.