ಜಿಲ್ಲೆ

ದಾಳಿ ವೇಳೆ 12 ಮೂರ್ತಿಗಳ ವಶ

ಚಿತ್ರದುರ್ಗ: ಗಣೇಶ ಚತುರ್ಥಿ ಹಬ್ಬದ ವೇಳೆ ಪರಿಸರಕ್ಕೆ ಮಾರಕವಾಗಿರುವ ಪಿಒಪಿ ಗಣೇಶ ಮೂರ್ತಿಗಳ ಮಾರಾಟ, ಬಳಕೆ ಜಿಲ್ಲೆಯಲ್ಲಿ ಸಂಪೂರ್ಣ ನಿಷೇಧಿಸಲಾಗಿದ್ದು, ವಿವಿಧೆಡೆ ಅಧಿಕಾರಿಗಳು ಬುಧವಾರ ದಾಳಿ ನಡೆಸಿದರು.

ದಾಳೆ ವೇಳೆ ಒಟ್ಟು 12 ಮೂರ್ತಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪರಿಸರ ಅಧಿಕಾರಿ ಪ್ರಕಾಶ್ ತಿಳಿಸಿದ್ದಾರೆ. ಉಪ ಪರಿಸರ ಅಧಿಕಾರಿ ರಾಜೇಶ್‌, ನಗರಸಭೆ ಪೌರಾಯುಕ್ತೆ ಎಂ.ರೇಣುಕಾ, ಪರಿಸರ ಇಂಜಿನಿಯರ್‌ ಜಾಫರ್‌ ಇತರರಿದ್ದರು.