ಜಿಲ್ಲೆ

ಒಂದು ಕಿಲೋ ಗಾಂಜಾ ವಶ : ಆರೋಪಿ ಬಂಧನ

ಸೌಮ್ಯ ಆರ್

ಕಾಸರಗೋಡು: ಮನೆಯೊಳಗೆ ಭಾರಿ ಪ್ರಮಾಣದ ಗಾಂಜಾ ವಶಪಡಿಸಿಕೊಂಡು ಸುದ್ದಿಯಾಗಿದ್ದ ಮಂಜೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯ ಉಪ್ಪಳದ ಮನೆಯೊಂದರಿಂದ ಮತ್ತೆ ಒಂದು ಕಿಲೋ ಗಾಂಜಾ ವಶಪಡಿಸಿಕೊಳ್ಳಲಾಗಿದೆ.

ಉಪ್ಪಳ ಬಪ್ಪಾಯಿತೊಟ್ಟಿಯ ಮನೆಯೊಂದರಿಂದ ಗಾಂಜಾ ವಶಪಡಿಸಿಕೊಳ್ಳಲಾಗಿದ್ದು, ನಿವಾಸಿ ಮಹಮ್ಮದ್ ಹರ್ಷಾದ್ ಎಂಬಾತನನ್ನು ಬಂಧಿಸಲಾಗಿದೆ. ಗಾಂಜಾ ಅಳತೆ ಮಾಡುವ ಇಲೆಕ್ಟ್ರಾನಿಕ್ ತೂಕದ ಯಂತ್ರ ಹಾಗೂ ಸಣ್ಣ ಪ್ಯಾಕೆಟ್‌ಗಳನ್ನೂ ವಶಪಡಿಸಿಕೊಳ್ಳಲಾಗಿದೆ. ಯುವಜನತೆಯನ್ನು ಕೇಂದ್ರೀಕರಿಸಿ ಗಾಂಜಾ ಮಾರಾಟ ಮಾಡುತ್ತಿದ್ದನೆನ್ನಲಾಗಿದೆ. ಖಚಿತ ಸುಳಿವಿನ ಹಿನ್ನೆಲೆಯಲ್ಲಿ ಮಂಜೇಶ್ವರ ಠಾಣೆ ಎಸ್.ಐ ನಿಖಿಲ್ ನೇತೃತ್ವದ ಪೊಲೀಸರ ತಂಡ ಕಾರ್ಯಾಚರಣೆ ನಡೆಸಿತ್ತು.