ಜಿಲ್ಲೆ

ಫೆ.1 ರಂದು ಶ್ರೀ ಮಡಿವಾಳ ಮಾಚಿದೇವರ ಜಯಂತಿ

ಮೈಸೂರು: ಫೆ.1 ರಂದು ಶ್ರೀ ಮಡಿವಾಳ ಮಾಚಿದೇವರ ಜಯಂತಿಯನ್ನು ಮಧ್ಯಾಹ್ನ 12 ಗಂಟೆಗೆ ಕರ್ನಾಟಕ ಕಲಾ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.

ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ ಘನ ಉಪಸ್ಥಿತಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್.ಸಿ ಮಹದೇವಪ್ಪರವರು ಉದ್ಘಾಟನೆಯನ್ನು ಮಾಡಲಿದ್ದು, ಚಾಮರಾಜ ಕ್ಷೇತ್ರದ ವಿಧಾನ ಸಭಾ ಸದಸ್ಯರಾದ ಕೆ.ಹರೀಶ್‌ಗೌಡ ರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸುವರು. ಪಶುಸಂಗೋಪನೆ ಮತ್ತು ರೇಷ್ಮೆ ಇಲಾಖೆಯ ಸಚಿವರಾದ ಕೆ. ವೆಂಕಟೇಶ್ ಅವರು ಉಪಸ್ಥಿತರಿರುವರು.

ಲೋಕಸಭಾ ಸದಸ್ಯರಾದ ಪ್ರತಾಪ್ ಸಿಂಹ, ಚಾಮರಾಜನಗರ ಕ್ಷೇತ್ರದ ಲೋಕಸಭಾ ಸದಸ್ಯರಾದ ವಿ.ಶ್ರೀನಿವಾಸ್ ಪ್ರಸಾದ್, ಮಂಡ್ಯ ಕ್ಷೇತ್ರದ ಲೋಕಸಭಾ ಸದಸ್ಯರಾದ ಸುಮಲತಾ ಅಂಬರೀಶ್ ಭಾಗವಹಿಸುವರು.

ಸಮಾರಂಭದ ಅತಿಥಿಗಳಾಗಿ ವಿಧಾನಸಭೆಯ ಶಾಸಕರುಗಳಾದ ತನ್ವೀರ್ ಸೇಠ್, ಜಿ.ಟಿ.ದೇವೇಗೌಡ, ಅನಿಲ್ ಕುಮಾರ್.ಸಿ, ರವಿಶಂಕರ್.ಡಿ, ಜಿ.ಡಿ.ಹರೀಶ್ ಗೌಡ, ದರ್ಶನ್ ಧ್ರುವನಾರಾಯಣ, ಟಿ.ಎಸ್ ಶ್ರೀವತ್ಸ ಹಾಗೂ ವಿಧಾನ ಪರಿಷತ್ತಿನ ಶಾಸಕರುಗಳಾದ ಮರಿತಿಬ್ಬೇಗೌಡ, ಎಚ್.ವಿಶ್ವನಾಥ್, ಡಾ. ಡಿ.ತಿಮ್ಮಯ್ಯ, ಸಿ.ಎನ್.ಮಂಜೇಗೌಡ, ಮಧು ಜಿ.ಮಾದೇಗೌಡ ರವರು ಭಾಗವಹಿಸುವರು. ಅಂಕಣಕಾರರಾದ ಆರ್. ರಘು(ಕೌಟಿಲ್ಯ) ರವರು ಮುಖ್ಯ ಭಾಷಣಕಾರರಾಗಿ ಭಾಗವಹಿಸುವರು.