ಜಿಲ್ಲೆ

ರಾಜ್ಯಮಟ್ಟದ ಹ್ಯಾಮರ್ ಥ್ರೋನಲ್ಲಿ ಪ್ರಥಮ

Gadag - Desk - Tippanna Avadoot

ಅಂಕೋಲಾ: ಬೆಂಗಳೂರಿನ ಹೊಸಕೋಟೆಯಲ್ಲಿ ಇತ್ತೀಚೆಗೆ ಆಯೋಜಿಸಿದ್ದ 43ನೇ ರಾಜ್ಯಮಟ್ಟದ ಮಾಸ್ಟರ್ ಅಥ್ಲೆಟಿಕ್ಸ್ ಚಾಂಪಿಯನ್​ಶಿಪ್​ನಲ್ಲಿ ಬೆಳಂಬಾರದ ರಾಜು ಬೋಳಾ ಗೌಡ ಹ್ಯಾಮರ್ ಥ್ರೋನಲ್ಲಿ ಪ್ರಥಮ ಸ್ಥಾನ ಹಾಗೂ ಜಾವಲಿನ್ ಎಸೆತದಲ್ಲಿ ತೃತೀಯ ಸ್ಥಾನ ಗಳಿಸಿ ಬಂಗಾರ ಹಾಗೂ ಕಂಚಿನ ಪದಕ ಪಡೆದು ಜಿಲ್ಲೆಗೆ, ತಾಲೂಕಿಗೆ ಕೀರ್ತಿ ತಂದಿದ್ದಾರೆ.
ಕಾರವಾರ ಸೇಂಟ್ ಜೋಸೆಫ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ದೈಹಿಕ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.