ಜಿಲ್ಲೆ

2.9 ಕೋಟಿ ರೂ. ವೆಚ್ಚದಲ್ಲಿ ಪಿಎಚ್‌ಸಿ ಅಭಿವೃದ್ಧಿ

ಚಿತ್ರದುರ್ಗ: ತಾಲೂಕಿನ ಭೀಮಸಮುದ್ರ ಗ್ರಾಮದಲ್ಲಿ ಕೆಎಂಇಆರ್‌ಸಿ ಅನುದಾನದಡಿ 2.9 ಕೋಟಿ ರೂ. ವೆಚ್ಚದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಅಭಿವೃದ್ಧಿ, ನೂತನ ಆಯುಷ್ಮಾನ್ ಆರೋಗ್ಯ ಉಪಕೇಂದ್ರಗಳ ನಿರ್ಮಾಣ ಕಾಮಗಾರಿಗೆ ಸಂಸದ ಗೋವಿಂದ ಎಂ ಕಾರಜೋಳ, ಶಾಸಕ ಕೆ.ಸಿ.ವಿರೇಂದ್ರ ಪಪ್ಪಿ ಶುಕ್ರವಾರ ಭೂಮಿ ಪೂಜೆ ನೆರವೇರಿಸಿದರು.

ಗೋವಿಂದ ಎಂ ಕಾರಜೋಳ ಮಾತನಾಡಿ, ಆರೋಗ್ಯ ಕೇಂದ್ರಗಳ ಕಟ್ಟಡ ಕಾಮಗಾರಿಗಳು ಬಹುಬೇಗ ಪೂರ್ಣಗೊಂಡು ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಲಿ ಎಂದರು.

ಇದೇ ವೇಳೆ ಗ್ರಾಮದಲ್ಲಿ ನೂತನ ಸಿಸಿ ರಸ್ತೆಗಳ ನಿರ್ಮಾಣ ಕಾಮಗಾರಿಗೂ ಭೂಮಿ ಪೂಜೆ ನೆರವೇರಿತು.

ಬಿಜೆಪಿ ಮುಖಂಡ ಜಿ.ಎಸ್.ಅನಿತ್‌ಕುಮಾರ್, ತಾಪಂ ಪ್ರಭಾರಿ ಇಒ ಚಂದ್ರಕುಮಾರ್, ಡಿಎಚ್‌ಒ ಡಾ.ರೇಣುಪ್ರಸಾದ್, ಟಿಎಚ್‌ಒ ಡಾ.ಬಿ.ವಿ.ಗಿರೀಶ್, ಗ್ರಾಪಂ ಅಧ್ಯಕ್ಷರು ಕ್ರಮವಾಗಿ ಸಿದ್ಧಾಪುರ ತಮ್ ಕಿನ್ ಬಾನು, ಹಿರೇಗುಂಟನೂರು ಸಿ.ರಾಧಮ್ಮ, ಭೀಮಸಮುದ್ರ ಆರ್.ರಾಧಾ, ಗೊಡಬನಹಾಳ್ ಮಧು ಇತರರಿದ್ದರು.