ಬೆಳಗಾವಿ; ಜಿಲ್ಲೆಯಲ್ಲಿ ಮೂರು ದಿನ ಸಂಪೂರ್ಣ ಲಾಕ್ ಡೌನ್ ವಿಧಿಸಿ ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ ಹೊಸ ಆದೇಶ ಹೊರಡಿಸಿದ್ದಾರೆ. ಮೇ.22ರ ಬೆಳಗ್ಗೆ 6ಗಂಟೆಯಿಂದ 24ರ ಬೆಳಗ್ಗೆ ಆರು ಗಂಟೆ ವರೆಗೆ ಸಂಪೂರ್ಣ ಲಾಕ್ ಡೌನ್ ಇರಲಿದೆ. ಈಗಾಗಲೇ ಜಾರಿಯಲ್ಲಿರುವ ಲಾಕ್ ಡೌನ್ ಗಿಂತ ಕಠಿಣವಾಗಿ ಲಾಕ್ ಡೌನ್ ಇದಾಗಿರಲಿದೆ ಎಂದು ಅವರು ತಿಳಿಸಿದ್ದಾರೆ.
ಆಸ್ಪತ್ರೆಗಳಿಗೆ ಸಂಚರಿಸಲು,ಹಾಲು, ಔಷಧಿ ಖರೀದಿಸಲು, ಪೂರೈಸಲು ಅವಕಾಶ ನೀಡಲಾಗಿದೆ. ಅಂತರ್ ಜಿಲ್ಲಾ, ಅಂತರ್ ರಾಜ್ಯ ಸರಕು ಸಾಗಾಣಿಕೆ ವಾಹನಗಳಿಗೆ ಅವಕಾಶ ನೀಡಲಾಗಿದೆ.
ಅಲ್ಲದೇ ಪೂರ್ವಾನುಮತಿ ಪಡೆದುಕೊಂಡು ನಿಗದಿ ಪಡಿಸಿದ ಮದುವೆಗಳಿಗೆ ಅವಕಾಶ ನೀಡಲಾಗಿದೆ. ತರಕಾರಿ, ದಿನಸಿ ಸೇರಿದಂತೆ ಅಗತ್ಯ ಸಾಮಾಗ್ರಿಗಳ ಖರೀದಿಗೆ ಅವಕಾಶವಿರುತ್ತದೆ
ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಲಾಕ್ ಡೌನ್ ಇನ್ನಷ್ಟು ಕಠಿಣಗೊಳಿಸಿ ಆದೇಶ ಹೊರಡಿಸಿದ ಜಿಲ್ಲಾಧಿಕಾರಿ ಈ ಆದೇಶ ಮಾಡಿದ್ದಾರೆ.