ಜಿಲ್ಲೆ

20 ಲಕ್ಷ ಭಕ್ತರಿಂದ ದೇವಿಯ ದರ್ಶನ :ಶ್ರೇಯಸ್ ಪಟೇಲ್

ಹಾಸನ: ಈ ಬಾರಿ ಹಾಸನಂಬ ಜಾತ್ರಾ ಮಹೋತ್ಸವದಲ್ಲಿ ರಾಜ್ಯ ಮತ್ತು ದೇಶದ ನಾನಾ ಭಾಗಗಳಿಂದ ಸುಮಾರು 20. 4 0 ಲಕ್ಷ ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆದಿದ್ದಾರೆ ಎಂದು ಸಂಸದ ಶ್ರೇಯಸ್ ಪಟೇಲ್ ಹೇಳಿದರು.

ಬಾಗಿಲು ಮುಚ್ಚಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ಉಸ್ತುವಾರಿ ಸಚಿವರು ಅನಾರೋಗ್ಯದ ಹಿನ್ನೆಲೆಯಲ್ಲಿ ಬಾಗಿಲು ಹಾಕುವ ಕಾರ್ಯಕ್ರಮಕ್ಕೆ ಆಗಮಿಸಿಲ್ಲ. ಆದರೆ, ಈ ಬಾರಿ ಜಾತ್ರಾ ಮಹೋತ್ಸವವನ್ನು ಅಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿಗಳ ನೇತೃತ್ವದಲ್ಲಿ ಯಶಸ್ವಿಯಾಗಿ ನೆರವೇರಿಸಲಾಗಿದೆ ಎಂದರು.

ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಜಿಲ್ಲಾ ಪಂಚಾಯತ್ ಮತ್ತು ಸಂಘ ಸಂಸ್ಥೆಗಳ ಒಗ್ಗಟ್ಟಿನಿಂ ಕೆಲಸ ಮಾಡಿದ್ದಾರೆ. 20 ಲಕ್ಷಕ್ಕೂ ಅಧಿಕ ಭಕ್ತರು ಆಗಮಿಸಿ ದೇವಿಯ ದರ್ಶನವನ್ನು ಪಡೆದಿದ್ದಾರೆ. ಅದೇ ರೀತಿ ಟಿಕೆಟ್, ಲಾಡು, ಸೀರೆ ಮಾರಾಟದಿಂದ 9.69 ಕೋಟಿ ರೂ ಆದಾಯ ಬಂದಿದೆ. ಕೆಲ ಸಣ್ಣಪುಟ್ಟ ಲೋಪಗಳಾಗಿದ್ದು, ಅದನ್ನ ಉಸ್ತುವಾರಿ ಸಚಿವರು ಶೀಘ್ರವೇ ಜಿಲ್ಲೆಗೆ ಆಗಮಿಸಿ ಸಮಾಲೋಚನ ಸಭೆ ನಡೆಸಲಿದ್ದಾರೆ ಎಂದು ಹೇಳಿದರು.