ಚಿತ್ರದುರ್ಗ: ರಾಷ್ಟ್ರವನ್ನು 2025ಕ್ಕೆ ಮಲೇರಿಯಾ ಮುಕ್ತವಾಗಿಸುವ ಗುರಿ ಹೊಂದಲಾಗಿದ್ದು, ಜಿಲ್ಲೆಯಲ್ಲೂ ಆ ನಿಟ್ಟಿನಲ್ಲಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಿ ಎಂದು ಡಿಎಚ್‌ಒ ಡಾ.ಆರ್.ರಂಗನಾಥ್ ಸಲಹೆ ನೀಡಿದರು.
ಡಿಎಚ್‌ಒ ಕಚೇರಿಯಲ್ಲಿ ಬುಧವಾರ ನಡೆದ ಪ್ರಯೋಗ ಶಾಲಾ ತಾಂತ್ರಿಕ ಅಧಿಕಾರಿಗಳಿಗೆ ಮೂರು ದಿನಗಳ ಮಲೇರಿಯಾ ಮೈಕ್ರೋಸ್ಕೋಪಿ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಡೆಂಘೆ, ಚಿಕುನ್ ಗುನ್ಯ ಇತರೆ ಕೀಟಜನ್ಯ ರೋಗಗಳ ಕುರಿತು ಹೆಚ್ಚೆಚ್ಚು ಪರೀಕ್ಷಿಸಿ, ಸೂಕ್ತ ಚಿಕಿತ್ಸೆ ನೀಡಿದಲ್ಲಿ ಮಲೇರಿಯಾವನ್ನು ನಿರ್ಮೂಲನೆ ಮಾಡಬಹುದು ಎಂದು ಹೇಳಿದರು.
ಜಿಲ್ಲಾ ರೋಗವಾಹಕ ರೋಗಗಳ ನಿಯಂತ್ರಣಾಧಿಕಾರಿ ಡಾ.ಎನ್.ಕಾಶಿ, ಕೀಟಶಾಸ್ತ್ರಜ್ಞೆ ನಂದಿನಿ ಕಡಿ, ಜಿಲ್ಲಾ ನೋಡಲ್ ಅಧಿಕಾರಿ ವೆಂಕಟೇಶ್, ಪ್ರಯೋಗ ಶಾಲಾ ತಂತ್ರಜ್ಞ ಮಲ್ಲಿಕಾರ್ಜುನ್, ಆರೋಗ್ಯ ಮೇಲ್ವಿಚಾರಕರಾದ ಶಿಲ್ಪಾ, ವಸಂತಾ, ಲಕ್ಷ್ಮಿ, ಪ್ರಯೋಗ ಶಾಲಾ ತಾಂತ್ರಿಕ ಅಧಿಕಾರಿಗಳಾದ ಶ್ರೀನಿವಾಸ್, ನಾಗರಾಜ್, ಲೋಕೇಶ್, ಪಾಂಡು, ಎಚ್.ಎ.ನಾಗರಾಜ್, ಶ್ವೇತಾ, ಕಾವ್ಯಾ ಇತರರಿದ್ದರು.