ಚಿತ್ರದುರ್ಗ:ವಿಶ್ವ ಕೌಶಲ ದಿನದ ಅಂಗವಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಜುಲೈ 20ರಂದು ಮಿನಿ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ. ಈ ಮೇಳದಲ್ಲಿ 8ಕ್ಕೂ ಹೆಚ್ಚು ಖಾಸಗಿ ಕಂಪನಿಗಳು ಪುರುಷ ಅಥವಾ ಮಹಿಳಾ ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳಲಿವೆ. ಎಸ್ಸೆಸ್ಸೆಲ್ಸಿ,ಪಿಯುಸಿ,ಡಿಪ್ಲೊಮೊ, ಐಟಿಐ,ಯಾವುದೇ ಪದವಿ ವಿದ್ಯಾರ್ಹತೆ ಹೊಂದಿದ ಹಾಗೂ 18ರಿಂದ 30 ವರ್ಷ ದೊಳಗಿನ ಅರ್ಹ ಆಸಕ್ತ ಅಭ್ಯರ್ಥಿಗಳು,ಅಗತ್ಯ ದಾಖಲೆಗಳೊಂದಿಗೆ ಮೇಳದಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗಾಗಿ 70224 59064,8105619020, 9945587060 ಗೆ ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.