ಜಿಲ್ಲೆ

20ರಿಂದ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ

ಚಿತ್ರದುರ್ಗ: ಭಾರತ ಚುನಾವಣಾ ಆಯೋಗ ಭಾವಚಿತ್ರ ಸಹಿತ ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2025ರ ವೇಳಾಪಟ್ಟಿ ಪ್ರಕಟಿ ದೆ. ಅರ್ಹತಾ ದಿನಾಂಕ 2025ಜನವರಿ 1ರ ಪ್ರಕಟಿತ ಪರಿಷ್ಕೃತ ವೇಳಾಪಟ್ಟಿಯಂತೆ ರಾಜ್ಯದೆಲ್ಲ ಮತಗಟ್ಟೆ ಮಟ್ಟದ ಅಧಿಕಾರಿಗಳು ಪ್ರತಿ ಮನೆಗೂ ಭೇಟಿ ನೀಡಿ ಪರಿಶೀಲಿಸಲಿದ್ದಾರೆ.
ಈ ಸಮಯದಲ್ಲಿ ತಿದ್ದುಪಡಿ,ಹೆಸರು ನೋಂದಣಿ, ಮೃತ ಮತ್ತು ಸ್ಥಳಾಂತರ ಮತದಾರರ ಹೆಸರು ತೆಗೆದು ಹಾಕುವಿಕೆ,18 ವರ್ಷ ಪೂ ರೈಸಿದ ಯುವ ಮತದಾರರ ಹೆಸರು ಸೇರ್ಪಡೆಗೆ ಅರ್ಜಿಗಳನ್ನು ಸಲ್ಲಿಸಬಹುದು. ಹಕ್ಕು ಮತ್ತು ಆಕ್ಷೇಪಣೆಗಳ ಅವಧಿ ವಿಶೇಷ ಅಭಿಯಾನ ದಿನಾಂಕಗಳಲ್ಲಿ ತಿದ್ದುಪಡಿ,ಸೇರ್ಪಡೆ ಹಾಗೂ ತೆಗೆದುಹಾಕುವಿಕೆಗೆ ಅರ್ಜಿ ಸಲ್ಲಿಸುವಂತೆ ಮುಖ್ಯಚುನಾವಣಾಧಿಕಾರಿ ಮನವಿ ಮಾಡಿದ್ದಾರೆ. ಸಾರ್ವಜನಿಕರು ಅರ್ಜಿ ನಮೂನೆ 6 ಮತ್ತು 8ನ್ನು ಸಲ್ಲಿಸುವಾಗ ಸ್ವಯಂ ಪ್ರೇರಿತವಾಗಿ ಆಧಾರ್ ಸಂಖ್ಯೆಗಳನ್ನು ಒದಗಿಸಬಹುದಾಗಿದೆ.
ಎಲ್ಲ ರೀತಿಯ ಚುಣಾವಣಾ ಸಂಬಂಧಿತ ಸೇವೆಗಳಿಗೆ ಮೊಬೈಲ್ ಫೋನ್‌ನಲ್ಲಿVoter Helpline application  ಮೂಲಕ ಅರ್ಜಿ ಸಲ್ಲಿಸಬಹುದು. ಆ.20 ರಿಂದ18ಅಕ್ಟೋಬರ್‌ರವರೆಗೆ ಮತಗಟ್ಟೆ ಅಧಿಕಾರಿಗಳು ಮನೆಗಳಿಗೆ ಭೇಟಿ ನೀಡಿ ಪರಿಶೀಲಿಸಲಿದ್ದಾರೆ.
ಮತಗಟ್ಟೆಗಳ ಮರು ಹೊಂದಾಣಿಕೆ ಸೇರಿದಂತೆ ಮತದಾರರ ಪಟ್ಟಿ,ಗುರುತಿನ ಚೀಟಿಗಳಲ್ಲಿರುವ ಲೋಪದೋಷ ಸರಿಪಡಿಸುವುದು, ಮತದಾರರ ಪಟ್ಟಿಯಲ್ಲಿ ಗುಣಮಟ್ಟವಿಲ್ಲದ ಭಾವಚಿತ್ರ ಬದಲಾಯಿಸುವುದು. ವಿಭಾಗ/ಭಾಗಗಳ ಮರುಹೊಂದಾಣಿಕೆ ಹಾಗೂ ಪ್ರಸ್ತಾ ಪಿತ ವಿಭಾಗ,ಭಾಗಗಳ ಮತಗಟ್ಟೆಗಳ ಸ್ಥಳ ಅಂತಿಮಗೊಳಿಸಿ ಮತಗಟ್ಟೆಗಳ ಪಟ್ಟಿಗಳಿಗೆ ಅನುಮೋದನೆ ಪಡೆದುಕೊಳ್ಳುವುದು. ನ್ಯೂನತೆ ಗಳನ್ನು ಗುರುತಿಸಿ ಸರಿಪಡಿಸುವುದು ಮತ್ತು ನಿಯಂತ್ರಣ ಕೋಷ್ಟಕದ ನವೀಕರಣ ನಡೆಯಲಿದೆ. ಆ.19ರಿಂದ ಅಕ್ಟೋಬರ್28ರವರೆಗೆ ನಮೂನೆ 1ರಿಂದ 8ರ ತಯಾರಿ ಹಾಗೂ ಅರ್ಹತಾ ದಿನಾಂಕ 2025 ಜನವರಿ 1ರಂತೆ ಸಮಗ್ರ ಕರಡು ಮತದಾರರ ಪಟ್ಟಿ ಸಿದ್ಧಪಡಿಸಲಾ ಗುವುದು. ಅಕ್ಟೋಬರ್ 29ರಂದು ಸಮಗ್ರ ಕರಡು ಮತದಾರರ ಪಟ್ಟಿ ಪ್ರಕಟಣೆ,ಲೋಪದೋಷಗಳ ಕುರಿತು ಅಕ್ಟೋಬರ್ 29ರಿಂದ ನವೆಂಬರ್ 28ವರೆಗೆ ಹಕ್ಕುಗಳು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸುವ ಅವಕಾಶ ಇರುತ್ತದೆ. ಹಕ್ಕುಗಳು ಮತ್ತು ಆಕ್ಷೇಪಣೆ ಸಲ್ಲಿಕೆ ಅವಧಿ ಮುಖ್ಯಚುನಾವಣಾಧಿಕಾರಿಗಳು ವಿಶೇಷ ಅಭಿಯಾನದ ದಿನಾಂಕಗಳನ್ನು ಶೀಘ್ರದಲ್ಲಿ ತಿಳಿಸಲಿದ್ದಾರೆ.
ಡಿಸೆಂಬರ್ 24ರೊಳಗೆ ಹಕ್ಕುಗಳು,ಆಕ್ಷೇಪಣೆಗಳ ವಿಲೇವಾರಿ ನಡೆಯಲಿದ್ದು,2025 ಜನವರಿ ಒಂದರಂದು ಅಂತಿಮ ಪ್ರಕಟಣೆಗಾಗಿ ಆಯೋಗದ ಅನುಮತಿ ಪಡೆದು ಮತ್ತು ದತ್ತಾಂಶ ನವೀಕರಣದೊಂದಿಗೆ 2025 ಜನವರಿ 6ರಂದು ಮತದಾರರ ಅಂತಿಮ ಪಟ್ಟಿ ಪ್ರಕಟಿಸ ಲಾಗುವುದೆಂದು ಪ್ರಕಟಣೆ ತಿಳಿಸಿದೆ.