ಜಿಲ್ಲೆ

21 ರಿಂದ ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮ

Mysuru - Desk - Naveen Kumar H P

ಮದ್ದೂರು: ಪಶುಪಾಲನಾ ಇಲಾಖೆ ಮತ್ತು ಕರ್ನಾಟಕ ಹಾಲು ಒಕ್ಕೂಟ ಮಹಾಮಂಡಳಿ ವತಿಯಿಂದ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ತಾಲೂಕಿನಲ್ಲಿ ಜಾನುವಾರುಗಳಿಗೆ 6ನೇ ಸುತ್ತಿನ ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಗೋವಿಂದು ತಿಳಿಸಿದ್ದಾರೆ.


ಅ.21 ರಿಂದ 13 ರವರೆಗೆ ಲಸಿಕೆ ಹಾಕಲಾಗುತ್ತದೆ. ತಾಲೂಕಿನಲ್ಲಿ ಸುಮಾರು 5,75,10 ಹಸುಗಳು ಮತ್ತು 1,81,50 ಎಮ್ಮೆಗಳಿಗೆ ಉಚಿತವಾಗಿ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಇದಕ್ಕೆ 74 ಲಸಿಕೆದಾರರನ್ನು 37 ತಂಡಗಳಾಗಿ ನೇಮಿಸಲಾಗಿದೆ. ಪ್ರತಿ ತಂಡವೂ ನಿಗದಿತ ದಿನಾಂಕದಂದು ಆಯಾ ಹಳ್ಳಿಗೆ ಬೆಳಗ್ಗೆ 6 ಗಂಟೆಗೆ ಪ್ರತಿ ದಿನ ವೇಳಾಪಟ್ಟಿಯಂತೆ ರೈತರ ಮನೆ ಮನೆಗೆ ತೆರಳಿ ಜಾನುವಾರುಗಳಿಗೆ ಲಸಿಕೆ ಹಾಕಲಾಗುತ್ತದೆ. ಸೋಮವಾರ ಬೆಳಗ್ಗೆ 8 ಗಂಟೆಗೆ ಕದಲೂರು ಹಾಲು ಉತ್ಪಾದಕರ ಸಹಕಾರ ಸಂಘದ ಆವರಣದಲ್ಲಿ ಆಯೋಜಿಸಿರುವ ಕಾರ್ಯಕ್ರಮವನ್ನು ಶಾಸಕ ಕೆ.ಎಂ.ಉದಯ್ ಉದ್ಘಾಟಿಸಲಿದ್ದಾರೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.