ಗೋಣಿಕೊಪ್ಪ: ಬಾಳೆಲೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ವಿವೇಕಾನಂದ ಯೂತ್‌ಮೂವ್‌ಮೆಂಟ್, ಕೊಡಗು ವನವಾಸಿ ಕಲ್ಯಾಣ, ಬಾಳೆಲೆ ಕೊಡಗು, ಗ್ರಾಮ ಪಂಚಾಯಿತಿ ಸಂಯುಕ್ತಾಶ್ರಯದಲ್ಲಿ ಬಾಳೆಲೆ ಹೋಬಳಿ ವ್ಯಾಪ್ತಿಯ 21 ಗಿರಿಜನ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ ಶುಕ್ರವಾರ ಆಯೋಜಿಸಲಾಗಿತ್ತು.
ಬಾಳೆಲೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಪೊಡಮಾಡ ಸುಖೇಶ್ ಭೀಮಯ್ಯ ಮಾತನಾಡಿ, ಮುಂದಿನ ಪೀಳಿಗೆಗೆ ಆಧಾರ ಸ್ತಂಭಗಳಾದ ಗರ್ಭಿಣಿ ಸ್ತ್ರೀಯರು ಉತ್ತಮ ಆರೋಗ್ಯಕರ ಪದ್ಧತಿಯನ್ನು ರೂಢಿಸಿಕೊಂಡು ಮಗುವಿನ ಆರೋಗ್ಯದ ಕಡೆ ಗಮನಹರಿಸಬೇಕು ಎಂದು ಸಲಹೆ ನೀಡಿದರು.
ಗ್ರಾಮ ಪಂಚಾಯಿತಿ ಸದಸ್ಯೆ ಮುಕ್ಕಾಟಿರ ಜಾನಕಿ, ತಾಲೂಕು ಶಿಶು ಅಭಿವೃದ್ಧಿ ಅಧಿಕಾರಿ ರಾಜೇಶ್, ಮಹಿಳಾ ಆರೋಗ್ಯ ಪರಿವೀಕ್ಷಕಿ ಕಾವೇರಮ್ಮ, ಬಾಳೆಲೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಅಶೋಕ್ ಕುಮಾರ್, ಪಿಡಿಒ ಸಂತೋಷ್, ಸ್ವಾಮಿ ವಿವೇಕಾನಂದ ಯೂತ್‌ಮೂವ್‌ಮೆಂಟ್ ಕಾರ್ಯಕ್ರಮ ವ್ಯವಸ್ಥಾಪಕಿ ಕುಸುಮಾ, ಮೇಲ್ವಿಚಾರಕ ಶ್ರತೇಶ್ ಇದ್ದರು.