ಬಾಗಲಕೋಟೆ: ಜಿಲ್ಲೆಯಲ್ಲಿ ಕೋವಿಡ್‌ನಿಂದ 30 ಜನ ಗುಣಮುಖರಾಗಿದ್ದು, ಹೊಸದಾಗಿ 22 ಕೋವಿಡ್ ಪ್ರಕರಣಗಳು ಸೋಮವಾರ ದೃಢಪಟ್ಟಿವೆ ಎಂದು ಜಿಲ್ಲಾಧಿಕಾರಿ ಕೆ.ರಾಜೇಂದ್ರ ತಿಳಿಸಿದ್ದಾರೆ.
ಹೊಸದಾಗಿ ದೃಢಪಟ್ಟವರ ಪೈಕಿ ಬಾಗಲಕೋಟೆ 6 , ಬಾದಾಮಿ 3, ಮುಧೋಳ 3, ಹುನಗುಂದ 5, ಜಮಖಂಡಿ 5 ಜನರಿಗೆ ಕಾಣಿಸಿಕೊಂಡಿದ್ದು, ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 1345 ಸ್ಯಾಂಪಲ್ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 13292 ಕೋವಿಡ್ ಪ್ರಕರಣಗಳು ದೃಡಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 13035 ಜನ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ. 131 ಮೃತ ಪ್ರಕರಣ ವರದಿಯಾಗಿವೆ ಎಂದು ತಿಳಿಸಿದ್ದಾರೆ.