ಜಿಲ್ಲೆ

22ರಂದು ರಾಜ್ಯಮಟ್ಟದ ಸಹಪಠ್ಯ ಚಟುವಟಿಕೆ ಸ್ಪರ್ಧೆ

ಚಿತ್ರದುರ್ಗ: ರಾಷ್ಟ್ರೀಯ ಜನಸಂಖ್ಯಾ ಶಿಕ್ಷಣ ಯೋಜನೆ(ಎನ್‌ಪಿಇಪಿ)ಯಡಿ ನಗರದ ಮುರುಘಾಮಠದಲ್ಲಿ ನ.22ರಂದು ರಾಜ್ಯಮಟ್ಟದ ಪಾತ್ರಾಭಿ ನಯ ಮತ್ತು ಜಾನಪದ ನೃತ್ಯ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ಡಯಟ್ ಪ್ರಾಚಾರ್ಯ ಎಂ.ನಾಸಿರುದ್ದೀನ್ ಹೇಳಿದರು.

ಡಯಟ್‌ನಲ್ಲಿ ಶನಿವಾರ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ,ರಾಜ್ಯದ 34 ಶೈಕ್ಷಣಿಕ ಜಿಲ್ಲೆಗಳಿಂದ ವಿದ್ಯಾರ್ಥಿಗಳು ಭಾ ಗವಹಿಸುತ್ತಿದ್ದಾರೆ. ಪ್ರತಿ ಜಿಲ್ಲೆಯಿಂದ 11ರಂತೆ 374 ವಿದ್ಯಾರ್ಥಿಗಳು,68 ಶಿಕ್ಷಕರು ಭಾಗವಹಿಸಲಿದ್ದಾರೆ ಎಂದರು.

ಜಿಲ್ಲಾ ಎನ್‌ಪಿಇಪಿ ನೋಡಲ್ ಅಧಿಕಾರಿ ಎಸ್.ಬಸವರಾಜು ಮಾತನಾಡಿ,ಪಾತ್ರಾಭಿನಯ ಮತ್ತು ಜಾನಪದ ನೃತ್ಯ ಸ್ಪರ್ಧೆಗೆ 5 ಥೀಮ್ ಗಳನ್ನು ನಿಗದಿಪಡಿಸಲಾಗಿದೆ. ಸ್ಪರ್ಧೆ ಶಾಲಾ,ತಾಲೂಕು, ಜಿಲ್ಲಾ,ರಾಜ್ಯಮತ್ತು ರಾಷ್ಟ್ರ ಹಂತಗಳಲ್ಲಿ ನಡೆಯಲಿದ್ದು,ಜಿಲ್ಲಾ ಹಂತದಲ್ಲಿ ಪ್ರಥಮ ಸ್ಥಾನ ಪಡೆದ ತಂಡಗಳು ರಾಜ್ಯಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸುತ್ತಿವೆ ಎಂದರು. ಉಪನ್ಯಾಸಕ ಆರ್.ನಾಗರಾಜು ಇದ್ದರು.