ಚಿತ್ರದುರ್ಗ: ಕರ್ನಾಟಕ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು ಜ.22ರಿಂದ 24ರವರೆಗೆ ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದಾರೆ. 21ರ ರಾತ್ರಿ 8ಗಂಟೆಗೆ ನಗರಕ್ಕೆ ಆಗಮಿಸಿ ವಾಸ್ತವ್ಯ ಮಾಡಲಿದ್ದಾರೆ. 22ರಂದು ಬೆಳಗ್ಗೆ 10ರಿಂದ 1.30ರವರೆಗೆ ಮತ್ತು ಮಧ್ಯಾಹ್ನ 2.30ರಿಂದ 5ರವರೆಗೆ ನಗರದ ಎಸ್‌ಜಿ ಕಲ್ಯಾಣ ಮಂಟಪದಲ್ಲಿ ಸಾರ್ವಜನಿಕರ ಕುಂದುಕೊರತೆಗಳ ಅಹವಾಲು ಸ್ವೀಕಾರ ಮತ್ತು ವಿಚಾರ ಣೆ ನಡೆಸುವರೆಂದು ಲೋಕಾಯುಕ್ತ ಎಸ್‌ಪಿ ಎನ್.ವಾಸುದೇವರಾಮ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಯಾವುದೇ ಸರ್ಕಾರಿ ಅಧಿಕಾರಿ,ನೌಕರರಿಂದ ಕಾನೂನು ರೀತಿಯಲ್ಲಿ ಆಗಬೇಕಾದ ಕೆಲಸದಲ್ಲಿ ವಿಳಂಬವಾಗಿದ್ದರೆ ಅಥವಾ ದುರಾಡಳಿತದಿಂದಾಗಿ ತೊಂದರೆಗೊಳಗಾಗಿದ್ದರೆ ಈ ಕುರಿತು ಸಾರ್ವಜನಿಕರು ಉಪಲೋಕಾಯುಕ್ತರ ಎದುರು ತಮ್ಮ ಅಹವಾಲುಗಳನ್ನು ಅರ್ಜಿ ನಮೂನೆ-1 ಮತ್ತು ನಮೂನೆ-2ರಲ್ಲಿ ಲಿಖಿತ ರೂಪದಲ್ಲಿ ದಾಖಲೆ,ಸಾಕ್ಷ್ಯಾಧಾರಗಳೊಂದಿಗೆ ಸಲ್ಲಿಸ ಬಹುದಾಗಿದೆ. ಸಂಜೆ 5.30 ಗಂಟೆಗೆ ಅದೇ ಸ್ಥಳದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸಹಯೋಗದೊಂದಿಗೆ ಕರ್ನಾಟಕ ಲೋಕಾಯುಕ್ತ ಕಾಯ್ದೆ ಕುರಿತಂತೆ ಶಿ ಕ್ಷಣ,ರೇಷ್ಮೆ, ಕೃಷಿ, ತೋಟಗಾರಿಕೆ ಇಲಾಖೆಗಳು,ಆರ್‌ಟಿಒ,ಸಬ್‌ರಿಜಿಸ್ಟರ್,ಸಮಾಜ ಕಲ್ಯಾಣ ಹಾಗೂ ನ್ಯಾಯಾಂಗ ಮೊದಲಾದ ಇಲಾಖೆ ಗಳ ಅಧಿಕಾರಿಗಳಿಗೆ ಏರ್ಪಡಿಸಿರುವ ಕಾನೂನು ಸಾಕ್ಷರತಾ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಜ.23ರಂದು ಬೆಳಗ್ಗೆ 9.45ಕ್ಕೆ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿರುವ ವಕೀಲರ ಸಂಘ,ಚಿತ್ರದುರ್ಗ ಬಾರ್ ಅಸೋಸಿಯೇಶನ್ ಸದಸ್ಯರೊಂದಿಗೆ ಸಾರ್ವಜನಿಕ ಆಡಳಿತ ಮತ್ತು ಗುಡ್ ಗೌರ್ನೆನ್ಸ್ ಕುರಿತು ಸಂವಾದ ನಡೆಸುವರು. ಬೆಳಗ್ಗೆ 11ರಿಂದ 11.30ರವರೆಗೆ ಜಿ ಪಂದಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸುವರು. 11.30ರಿಂದ 1.30ರವರೆಗೆ ಹಾಗೂ ಮಧ್ಯಾಹ್ನ 2.30ರಿಂದ ಅಲ್ಲಿಯೇ ಜಿಲ್ಲೆಗೆ ಸಂಬಂಧಿಸಿದಂತೆ ಲೋಕಾಯುಕ್ತ ಸಂಸ್ಥೆಯಲ್ಲಿ ಈಗಾಗಲೇ ದಾಖಲಾಗಿರುವ(ಉಪಲೋಕಾಯುಕ್ತರ ಕಾರ್ಯವ್ಯಾಪ್ತಿ)ಪ್ರಕರಣ ಗಳ ಕುರಿತು ತನಿಖೆ,ವಿಚಾರಣೆಗೆ ಬಾಕಿ ಇರುವ ಪ್ರಕರಣಗಳಿಗೆ ಸಂಬಂಧಿಸಿದ ದೂರುದಾರರು ಹಾಗೂ ಎದುರುದಾರರ ಸಮ್ಮುಖದಲ್ಲಿ ವಿಚಾರಣೆ ನಡೆಸುವರು. ದೂರುದಾರರು ಮತ್ತು ಎದುರುದಾರರು ನಿಗದಿತ ಸಮಯದಲ್ಲಿ ಹಾಜರಿದ್ದು,ಇದರ ಸದುಪ ಯೋಗ ಪಡೆ ದುಕೊಳ್ಳ ಬೇಕು. 24ರಂದು ಬೆಳಗ್ಗೆ 9ರಿಂದ 10ರವರೆಗೆ ಜಿಲ್ಲಾ ನ್ಯಾಯಾಲಯದಲ್ಲಿ ನ್ಯಾಯಾಂಗ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ಹಾಗೂ ಸಂವಾದ ನಡೆಸುವರು.
ಬೆಳಗ್ಗೆ 10.15ಕ್ಕೆ ಪ್ರವಾಸಿ ಮಂದಿರದಲ್ಲಿ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸುವರು. ಮಧ್ಯಾಹ್ನ 12ರಿಂದ 2 ಗಂಟೆವರೆಗೆ ಹಾಗೂ ಮಧ್ಯಾಹ್ನ 3ರಿಂದ ಸಂಜೆ 5ರವರೆಗೆ ವಿವಿಧ ಸರ್ಕಾರಿ ಕಚೇರಿಗಳು ಹಾಗೂ ಸಂಸ್ಥೆಗಳಿಗೆ ಅನಿರೀಕ್ಷಿತ ಭೇಟಿ ನೀಡುವ ರೆಂದು ಲೋಕಾಯುಕ್ತ ಎಸ್‌ಪಿ ತಿಳಿಸಿದ್ದಾರೆ.