ಜಿಲ್ಲೆ

23 ಜಿಲ್ಲೆಗಳಲ್ಲಿ ಶೂನ್ಯ ಮರಣ ದಾಖಲು

satishvml

ಬೆಂಗಳೂರು: ರಾಜ್ಯದಲ್ಲಿ ಕರೊನಾ ಮತ್ತಷ್ಟು ಇಳಿಮುಖವಾಗಿದ್ದು, ಮಂಗಳವಾರ 1,336 ಹೊಸ ಪ್ರಕರಣಗಳು ದಾಖಲಾಗಿವೆ. ಅಲ್ಲದೆ 23 ಜಿಲ್ಲೆಗಳಲ್ಲಿ ಶೂನ್ಯ ಮರಣ ದಾಖಲಾಗಿದೆ.

2,100 ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಗುಣಮುಖರ ಸಂಖ್ಯೆ 8.27ಲಕ್ಷಕ್ಕೆ ತಲುಪಿದೆ. ಇದರೊಂದಿಗೆ ಚೇತರಿಕೆ ಪ್ರಮಾಣ ಶೇ. 95.72ಕ್ಕೆ ಏರಿಕೆಯಾಗಿದೆ. 16 ಸೋಂಕಿತರ ಸಾವಿನೊಂದಿಗೆ ಮೃತರ ಸಂಖ್ಯೆ 11,557 ಕ್ಕೇರಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 25,323ಕ್ಕೆ ಕುಸಿದಿದ್ದು, 693 ಮಂದಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.