ಧಾರವಾಡ: ಜಿಲ್ಲೆಯಲ್ಲಿ ಶನಿವಾರ 232 ಜನರಿಗೆ ಕರೊನಾ ಸೋಂಕು ದೃಢಪಟ್ಟಿದ್ದು, ಒಟ್ಟು ಪ್ರಕರಣ ಸಂಖ್ಯೆ 16917ಕ್ಕೇರಿದೆ. ಇದುವರೆಗೆ 13847 ಜನರು ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 2591 ಸಕ್ರಿಯ ಪ್ರಕರಣಗಳಿದ್ದು, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಶನಿವಾರ ನಾಲ್ವರು ಮೃತಪಟ್ಟಿದ್ದಾರೆ. ಕರೊನಾದಿಂದ ಸಂಭವಿಸಿರುವ ಸಾವಿನ ಸಂಖ್ಯೆ 479ಕ್ಕೆ ತಲುಪಿದೆ.